ಬ್ರೇಕಿಂಗ್ ನ್ಯೂಸ್
01-02-24 06:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.1: ಕೇಂದ್ರ ಬಜೆಟ್‌ನಲ್ಲಿ ಹೊಸದೇನೂ ಇಲ್ಲ. ಪ್ರತಿ ಬಾರಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ರೀತಿ ಅನ್ಯಾಯ ಮುಂದುವರಿದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಬಜೆಟ್ ಹೆಸರಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದಾರೆ.
ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಜೆಟ್ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಿದ್ದು ಅದರ ಬದಲಿಗೆ ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು? ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿವೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್ ಇದಾಗಿದೆ ಎಂದರು.
Lok Sabha MP from Bengaluru Rural DK Suresh accused the centre of not releasing funds to South Indian states and threatened to raise a demand for a separate country if the trend continues. Suresh made the statement outside the Parliament in Delhi while criticising the budget presented by Finance Minister Nirmala Sitharaman.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am