ಬ್ರೇಕಿಂಗ್ ನ್ಯೂಸ್
02-02-24 08:05 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2: ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಟೆಲಿ ಐಸಿಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ನುರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪೆಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿ ಐಸಿಯು ವ್ಯವಸ್ಥೆ ಸಹಕಾರಿ. ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವ ತಂತ್ರಜ್ಞಾನಗಳ ಬಳಕೆಗೆ ನಾವು ಒತ್ತು ನೀಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೋಗ್ಯ ಪರಿಶೀಲನೆ ಹಾಗೂ ಚಿಕಿತ್ಸಾ ಸಲಹೆಗಳನ್ನ ಟೆಲಿ ಐಸಿಯು ಮೂಲಕ ತಜ್ಞ ವೈದ್ಯರಿಂದ ಪಡೆಯಬಹುದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈಗಾಗಲೇ ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಈ ವ್ಯವಸ್ಥೆಯನ್ನ ಜಾರಿಗೆ ತರಲಾಗಿದ್ದು, ಇದೀಗ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಬಳ್ಳಾರಿ ಮೆಡಿಕಲ್ ಕಾಲೇಜುಗಳಲ್ಲಿ ಟೆಲಿಐಸಿಯು ಅನುಷ್ಠಾನಗೊಳಿಸಿದ್ದೇವೆ. ಒಟ್ಟು ನಾಲ್ಕು ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನ ಹಬ್ ಗಳಾಗಿ ರಚಿಸಲಾಗಿದ್ದು, ಇವುಗಳಿಗೆ 41 ತಾಲೂಕು ಆಸ್ಪತ್ರೆಗಳನ್ನ ಲಿಂಕ್ ಮಾಡಲಾಗಿದೆ. ಈ 41 ತಾಲೂಕು ಆಸ್ಪತ್ರೆಗಳಲ್ಲಿ 10 ಟೆಲಿಐಸಿಯು ಬೆಡ್ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, AI ತಂತ್ರಜ್ಞಾನಗಳ ಮೂಲಕ ತಜ್ಞ ವೈದ್ಯರ ಸಲಹೆಯೊಂದಿಗೆ ಸೂಪರ್ ಸ್ಪೆಷಾಲಿಟಿ ಕೇರ್ ರೋಗಿಗಳಿಗೆ ದೊರೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರು ಹಾಗೂ ಬಳ್ಳಾರಿ ಕ್ಲಸ್ಟರ್ ಗೆ ತಲಾ 9 ತಾಲೂಕು ಆಸ್ಪತ್ರೆಗಳನ್ನ ಜೋಡಿಸಲಾಗಿದ್ದು, ಹುಬ್ಬಳ್ಳಿ ಕಿಮ್ಸ್ ಗೆ 10 ಹಾಗೂ ಮೈಸೂರು ವೈದ್ಯಕೀಯ ಸಂಸ್ಥೆಗೆ 13 ತಾಲೂಕು ಆಸ್ಪತ್ರೆಗಳನ್ನ ಲಿಂಕ್ ಮಾಡಲಾಗಿದೆ. ಒಟ್ಟು 41 ತಾಲೂಕು ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ರಚಿಸಲಾಗಿದೆ.
ಮುಂದಿನ ವರ್ಷ 60 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಐಸಿಯು ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿಐಸಿಯು ಮೂಲಕ ತಜ್ಞ ವೈದ್ಯರ ಆರೋಗ್ಯ ಸೇವೆ ಕಲ್ಪಿಸಿಕೊಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Health Minister Dinesh Gundu Rao has said that tele-ICU facilities will be provided in all taluk hospitals in the state in a phased manner. He was speaking at the inauguration of the tele-ICU at Victoria Hospital in Bengaluru today.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm