ಬ್ರೇಕಿಂಗ್ ನ್ಯೂಸ್
07-02-24 03:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 07: ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.
ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿ ಬಿಟ್ಟಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರ ತೆಗೆಯಲು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ, ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು ತೀವ್ರ ನಿಗಾಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ.

ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳ ತಜ್ಞ ವೈದ್ಯ ಡಾ.ಪ್ರದೀಪ್ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್, ಕಾಡಿಗೆ ಡಬ್ಬಿ, ಅಡಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿದ್ದವು. ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯರಾದ ಡಾ.ವಿನೋದ್ ಸಲಹೆ ನೀಡಿದ್ದಾರೆ. ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಹಾಗೂ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಪ್ರಶಾಂತ್ ಅವರು ಶ್ಲಾಘಿಸಿದ್ದಾರೆ.
Shivamogga Doctors Remove 11cm Fish Stuck In 11 Month Old Boys Throat. An 11-month-old toddler, who accidentally swallowed a fish kept for cooking at home, was saved by a team of paediatricians at a private hospital in Shivamogga
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm