ಬ್ರೇಕಿಂಗ್ ನ್ಯೂಸ್
09-02-24 08:58 pm HK News Desk ಕರ್ನಾಟಕ
ದಾವಣಗೆರೆ, ಫೆ 09: ದೇಶದ್ರೋಹ ಮಾಡುವವರು ಹಾಗೂ ದೇಶದ್ರೋಹದ ಹೇಳಿಕೆ ನೀಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಲಿ ಎಂದು ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ನಡೆದ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸದ ಡಿ.ಕೆ ಸುರೇಶ್ ಅವರ ʻಪ್ರತ್ಯೇಕ ರಾಷ್ಟ್ರʼದ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಯಾವ ದೇಶದ ಅಧ್ಯಕ್ಷರಾಗಿದ್ದಾರೆ ಎಂದು ಸ್ಪಷ್ಟವಾಗಿ ಹೇಳಲಿ. ಅವರ ಪಕ್ಷದ ಡಿ.ಕೆ ಸುರೇಶ್, ವಿನಯ್ ಕುಲಕರ್ಣಿ ದೇಶ ಇಬ್ಭಾಗ ಮಾಡಬೇಕು ಅಂತ ಹೇಳುತ್ತಿದ್ದಾರೆ. ತಮ್ಮ ಪಕ್ಷದ ಸಂಸದರೇ ಹೇಳಿದಂತೆ ನೀವು ಉತ್ತರ ಭಾರತದ ಅಧ್ಯಕ್ಷರಾ? ಅಥವಾ ದಕ್ಷಿಣ ಭಾರತದ ಅಧ್ಯಕ್ಷರಾ? ಎಂದು ಸ್ಪಷ್ಟಪಡಿಸಿ ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್‌ನಲ್ಲಿರುವ ವಿನಯ್ ಕುಲಕರ್ಣಿ, ಡಿಕೆ ಸುರೇಶ್ ಇಬ್ಬರೂ ದೇಶದ್ರೋಹಿಗಳು. ತಾಕತ್ತಿದ್ದರೆ, ದೇಶದ್ರೋಹದ ಹೇಳಿಕೆ ನೀಡಿದ ಈ ಇಬ್ಬರನ್ನೂ ಪಕ್ಷದಿಂದ ಕಿತ್ತು ಬಿಸಾಕಿ ಎಂದು ಒತ್ತಾಯಿಸಿದರಲ್ಲದೇ, ಈ ರೀತಿ ದೇಶದ್ರೋಹ ಹೇಳಿಕೆ ನೀಡುವ, ದೇಶ ದ್ರೋಹ ಕೆಲಸ ಮಾಡುವರನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಒತ್ತಾಯಿಸಿದ್ದಾರೆ.
ನಮ್ಮ ಎಲ್ಲ ಕಾರ್ಯಕರ್ತರ ʻಜೈಶ್ರೀರಾಮ್ʼ ಕೂಗು ಬೆಂಗಳೂರಿನಲ್ಲಿ ನಾಟಕ ಮಾಡುತ್ತಿರುವ ಸಿದ್ದರಾಮಯ್ಯನಿಗೆ ಕೇಳಿಸಬೇಕು. ಜಿನ್ನಾ ಸಂಸ್ಕೃತಿ ಕಾಂಗ್ರೆಸ್ ಹಾಗೂ ವಿನಯ್ ಕುಲಕರ್ಣಿಗೆ ಬಂದಿದೆ. ಆದ್ರೆ ನಾವು ದೇಶವನ್ನು ಇಬ್ಭಾಗ ಮಾಡಲು ಬಿಡೋದಿಲ್ಲ. ಬೇಕಾದ್ರೆ ಪಾಕಿಸ್ತಾನವನ್ನೂ ಸೇರಿಸಿಕೊಂಡು ಅಖಂಡ ಭಾರತವನ್ನಾಗಿ ಮಾಡ್ತೀವಿ ಎಂದು ನಾಲಿಗೆ ಹರಿಬಿಟ್ಟಿದ್ದಾರೆ
ಕಾಂಗ್ರೆಸ್ ನಾಯಕರಿಗೆ ಮೋದಿ ಅಂದ್ರೆ ಎದೆ ನಡುಗುತ್ತೆ. ಏಕೆಂದರೆ ಅವರ ಮನೆಯಲ್ಲಿರುವವರೆಲ್ಲಾ ಮೋದಿಗೆ ವೋಟ್ ಹಾಕ್ತೀವಿ ಅಂತಿದ್ದಾರೆ. ಗುಂಪಿನಲ್ಲಿ ಕೂಡಿದಾಗ ನಾನು ಕೂಡ ಮೋದಿಗೆ ವೋಟ್ ಹಾಕ್ತೀನಿ ಅಂತಾ ದೇಶಭಕ್ತ ಕಾಂಗ್ರೆಸ್ ಮುಖಂಡರು ಹೇಳ್ತಾರೆ. 900 ವರ್ಷಗಳ ಕಾಲ ಈ ದೇಶವನ್ನ ಮುಸ್ಲಿಮರು ಆಳಿದರು. ಕಾಶಿ, ಮಥುರಾ, ಅಯೋಧ್ಯೆಯಲ್ಲಿ ಮಸೀದಿಗಳೇ ತಲೆ ಎತ್ತಿದ್ದವು. ಭಾರತೀಯರು ಗುಲಾಮರು ಅಂತಾ ಬಾಬರ್‌ನ ಮಸೀದಿಗಳು ಹೇಳುತ್ತಿದ್ದವು. ಆದ್ರೆ ಅಯೋಧ್ಯೆ ರಾಮಮಂದಿರದಿಂದ ಇಡೀ ದೇಶ ಒಂದುಗೂಡಿತು. ಇದೀಗ ಕಾಶಿ, ಮಥುರಾ ಸಹ ಹಿಂದೂಗಳ ಕೈ ಸೇರಿದ್ರೆ ಹಿಂದೂಗಳಿಗೆ ಯಶಸ್ಸು ಸಿಕ್ಕಂತಾಗುತ್ತದೆ. ಅಲ್ಲದೇ ಅಯೋಧ್ಯೆಗೆ ಮುಸ್ಲಿಮರೂ ಹೋಗಿ ಶ್ರೀರಾಮನ ದರ್ಶನ ಪಡೆಯುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ನವರಿಗೆ ಆತಂಕ ಶುರುವಾಗಿದೆ ಎಂದು ಎಚ್ಚರಿಸಿದ್ದಾರೆ.
ಈಶ್ವರಪ್ಪ ವಿರುದ್ಧ ಎಫ್‌ಐಆರ್ ;
ಇನ್ನು ಈಶ್ವರಪ್ಪ ಅವರ ವಿರುದ್ಧ ಇಲ್ಲಿನ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆಯನ್ನು ಉಂಟು ಮಾಡುತ್ತದೆ. ಗಲಭೆಗಳು ಜರುಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಿಜಲಿಂಗಪ್ಪ ಬಡಾವಣೆಯ ಹನುಮಂತ ಎಂಬುವರು ಐಪಿಸಿ 505(1)(ಸಿ), 505(2) ಮತ್ತು 506 ಅಡಿ ಪ್ರಕರಣ ದಾಖಲಿಸಿದ್ದಾರೆ
ವಿವಾದಾತ್ಮಕ ಹೇಳಿಕೆಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ ;
ವಿವಾದಾತ್ಮಕ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, “ಒಂದು ವೇಳೆ ದೇಶದಲ್ಲಿ ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿಯಾಗುತ್ತದೆ” ಎಂದಿದ್ದಾರೆ. ಕಲಬುರಗಿಯಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ, “ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಈಶ್ವರಪ್ಪ ಹೇಳಿಕೆಯಂತೆ ಕಾನೂನು ಜಾರಿಗೊಳಿಸಿದರೆ ಬಿಜೆಪಿಯ ಅರ್ಧದಷ್ಟು ಮಂದಿ ಖಾಲಿಯಾಗುತ್ತಾರೆ. ಆರ್‌ಎಸ್‌ಎಸ್ ಬಾಗಿಲು ಮುಚ್ಚಿಕೊಳ್ಳುತ್ತದೆ” ಎಂದು ಲೇವಡಿ ಮಾಡಿದರು.
“ಈಶ್ವರಪ್ಪ ಅವರಿಗೆ ಬಿಜೆಪಿಯವರು ಕಡ್ಡಾಯ ನಿವೃತ್ತಿ ಕೊಟ್ಟಿದ್ದಾರೆ. ಅದಕ್ಕಾಗಿ ಅವರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. ರಾಜಕೀಯ ಜೀವನ ಮುಗಿದುಹೋಗಿದೆ. ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ” ಎಂದು ಕಿಚಾಯಿಸಿದ್ದಾರೆ.
Senior BJP leader KS Eshwarappa has once again stirred a row, calling for a law that enables the killing of Congress MP DK Suresh and MLA Vinay Kulkarni. Calling the two leaders "traitors", Mr Eshwarappa claimed that they want to divide India into pieces.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am