ಬ್ರೇಕಿಂಗ್ ನ್ಯೂಸ್
10-02-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಈಶ್ವರಪ್ಪ ಅವರ ಮನೆಗೆ ನಾನೇ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಸಂಸದ ಡಿಕೆ ಸುರೇಶ್ ಕೆಎಸ್ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ದೇಶದ್ರೋಹಿಗಳಿಗೆ ಗುಂಡಿಕ್ಕುವ ಕಾನೂನು ತರಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಹುಶಃ ಇತಿಹಾಸ ನಿಮಗೆಲ್ಲಾ ಗೊತ್ತಿದೆ. ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ ಹೀಗೆ ಹೇಳಿರಬಹುದು. ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳಬೇಕು?. ಬಡವರ ಮಕ್ಕಳನ್ನು ಯಾಕೆ ರೊಚ್ಚಿಗೆ ಎಬ್ಬಿಸ್ತಿರಾ?. ಪಕ್ಷದಲ್ಲಿ ಅವರನ್ನು ಮೂಲೆ ಗುಂಪು ಮಾಡಿದ್ದಾರೆ. ಅದಕ್ಕೆ ಗಮನ ಸೆಳೆಯಲು ಮಾತನಾಡ್ತಿದ್ದಾರೆ ಎಂದು ಟೀಕಿಸಿದರು.
ನಾನೇ ಸಮಯ ಕೊಡ್ತೀನಿ. ಒಂದು ವಾರದಲ್ಲಿ ಯಾವಾಗ ಅಂತಲೂ ಹೇಳುವೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗ್ತೀನಿ. ಅವರೇ ನನಗೆ ಗುಂಡು ಹೊಡೆಯಲಿ. ಹೇಳಿಕೆ ಮೂಲಕ ಬಡವರ ಮಕ್ಕಳನ್ನು ರೊಚ್ಚಿಗೆಬ್ಬಿಸುವುದು ಬೇಡ. ಅವರೇ ಆ ಕೆಲಸ ಮಾಡಲಿ ಎಂದು ಟಾಂಗ್ ನೀಡಿದರು.
ಫೆ. 08 ರಂದು ದಾವಣಗೆರೆಲ್ಲಿ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪ ಅವರು, ''ಸಂಸದ ಡಿಕೆ ಸುರೇಶ್, ಶಾಸಕ ವಿನಯ್ ಕುಲಕರ್ಣಿ ಇಬ್ಬರು ದೇಶದ್ರೋಹಿಗಳು. ಇಬ್ಬರನ್ನು ಪಕ್ಷದಿಂದ ಕಿತ್ತು ಬಿಸಾಕಬೇಕು. ಈ ವೇದಿಕೆಯಿಂದಲೇ ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುವೆ. ಈ ರೀತಿಯ ದೇಶ ವಿಭಜನೆ ಎಂಬುದು ಜವಾಹರಲಾಲ್ ನೆಹರು ಕಾಲದಿಂದ ಬಂದಿದೆ'' ಎಂದು ಖಾರವಾಗಿ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆ ಬಳಿಕ ಅವರ ವಿರುದ್ಧ ಇದೀಗ ಬೆಂಗಳೂರು ಮತ್ತು ದಾವಣಗೆರೆಯಲ್ಲಿ ದೂರು ಕೂಡ ದಾಖಲಾಗಿದೆ.
ಒಂದೆಡೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಭಾರತ ಒಂದೇ ಎಂದು ಎಐಸಿಸಿ ಅಧ್ಯಕ್ಷರು ಹೇಳಿದರೆ, ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ ಅವರದ್ದೇ ಪಕ್ಷದ ಇಬ್ಬರು ದೇಶದ್ರೋಹಿಗಳು ದಕ್ಷಿಣ ಭಾರತ ಪ್ರತ್ಯೇಕ ರಾಷ್ಟವಾಗಬೇಕು ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಕಿಡಿಕಾರಿದ್ದರು. ಇನ್ನು ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿರುವ ಕೆಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Dk Suresh says i will visit K. S. Eshwarappa house let him shoot me open challenge, we all know which party killed Gandhi he taunted.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm