ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am