ಬ್ರೇಕಿಂಗ್ ನ್ಯೂಸ್
14-02-24 10:59 am Bangalore Correspondent ಕರ್ನಾಟಕ
ಬೆಂಗಳೂರು, ಫೆ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಪಾಲಿಕ ಕ್ರಮ ಕೈಗೊಳ್ಳುತ್ತಿದೆ.
ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ರಾಕ್ಲೈನ್ ಮಾಲ್ ಗೆ ಬಿಬಿಎಂಪಿ ಬಿಗ್ ಜದಾಡಿದೆ.
2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಟಿ ನೋಟಿಸ್ ನೀಡಿತ್ತು. ನೋಟಿಸ್ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್ಗೆ ಬೀಗಮುದ್ರೆ ಹಾಕಿದ್ದಾರೆ.
2023ರ ನವೆಂಬರ್ ಮತ್ತು 2024ರ ಫೆಬ್ರವರಿ ನಡುವೆ 46,318 ಆಸ್ತಿಗಳಿಗೆ ತೆರಿಗೆ ಬಾಕಿ ವಸೂಲಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದ 7,203 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.
ಕಾರುಗಳು ಮತ್ತು ಶಾಲಾ ಬಸ್‌ಗಳಂತಹ ಚರ ಆಸ್ತಿಗಳನ್ನು ಮೊದಲ ಬಾರಿಗೆ ಬಿಬಿಎಂಪಿ ಜಪ್ತಿ ಮಾಡಿತ್ತು. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ಇಂದು ನಾಲ್ಕು ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.
2023ರ ಡಿಸೆಂಬರ್ನಲ್ಲಿ ಬಿಬಿಎಂಪಿ 51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬೀಗಮುದ್ರೆ ಹಾಕಿತ್ತು. 2019-20ರ ವರೆಗಿನ ಆಸ್ತಿ ತೆರಿಗೆ ಬಾಕಿಯಿದ್ದ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿತ್ತು. ಮಂತ್ರಿ ಮಾಲ್ ಮಾಲಿಕ 2020ರ ಆಗಸ್ಟ್ನಲ್ಲಿ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್ನ ಆಡಳಿತ ಮಂಡಳಿ ತೆರಿಗೆ ಪಾವತಿಸಿರಲಿಲ್ಲ, ಹೀಗಾಗಿ ಕಳೆದ ವರ್ಷ ಬೀಗ ಹಾಕಿತ್ತು.
Bangalore Actor producer Rockline venkatesh Mall closed by BBMC after non payment of tax. It is a popular mall owned by leading Kannada producer Rockline Venkatesh. The mall was inaugurated in 2011 by the then-state Home Minister R Ashoka.
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm