ಬ್ರೇಕಿಂಗ್ ನ್ಯೂಸ್
14-02-24 12:14 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಮಾಜಿ ಸಚಿವ ಗೋಪಾಲಯ್ಯಗೆ ಜೀವಬೆದರಿಕೆ ಕರೆ ಬಂದಿದೆ. ರಾಜಧಾನಿ ಬೆಂಗಳೂರಿನ ಬಸವೇಶ್ವರನಗರ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರು ಕರೆ ಮಾಡಿ ಜೀವನ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವರು ಆರೋಪಿಸಿದ್ದಾರೆ.
ನಿನ್ನೆ ರಾತ್ರಿ 11 ರ ಸುಮಾರಿಗೆ ಗೋಪಾಲಯ್ಯಗೆ ಕರೆ ಮಾಡಿದ್ದ ಪದ್ಮರಾಜ್, ಹಣಕ್ಕೆ ಬೇಡಿಕೆ ಇಟ್ಟು ಅವಾಚ್ಯವಾಗಿ ನಿಂದಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಶಾಸಕ ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.
ಇಂದು ಬೆಳಗ್ಗೆ ಸದನಕ್ಕೆ ತೆರಳಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗೆ ದೂರು ನೀಡಿದ್ದಾರೆ.
ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಪದ್ಮರಾಜ್ ಕರೆ ಮಾಡಿದ್ದ. ಸುಮಾರು 6 ನಿಮಿಷ ಮಾತನಾಡಿ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಅತ್ಯಂತ ಕೆಟ್ಟ ಶಬ್ದಗಳನ್ನು ಬಳಕೆ ಮಾಡಿ ನಿಂಧಿಸಿದ್ದಾನೆ. ಅಲ್ಲದೇ ಹುಡುಗರನ್ನು ಕಳುಹಿಸಿ ನಿನ್ನನ್ನ ಚಿಂದಿ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದಾನೆ. ನನಗೆ ಮಾತ್ರ ಅಲ್ಲ ಈ ಹಿಂದೆಯೂ ಹಲವು ಶಾಸಕರು, ನಾಯಕರು ಸೇರಿದಂತೆ ಗಣ್ಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಬಿಜೆಪಿ ಶಾಸಕರ ಆರೂಪಿಸಿದ್ದಾರೆ.
ಕರೆ ಮಾಡಿ ಜೀವ ಬೆದರಿಕೆ ಹಾಕಿದ ಬೆನ್ನಲ್ಲೇ ನಾನು ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೀನಿ, ತಡರಾತ್ರಿಯೇ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದೇನೆ. ನಾನು ಅವನಿಗೆ ಸಾಕಷ್ಟು ಬಾರಿ ಮಾನವೀಯತೆ ಮೇರೆಗೆ ಹಲವು ಬಾರಿ ಸಹಾಯ ಮಾಡಿದ್ದೀನಿ. ಪದ್ಮರಾಜ್ ಮಗಳಿಗೆ ಮೆಡಿಕಲ್ ಸೀಟ್ ಕೊಡಿಸಿದ್ದೀನಿ. ನಂತರ ಆಕೆಗೆ ESI ಆಸ್ಪತ್ರೆಯಲ್ಲಿ ಕೆಲಸವನ್ನು ಕೊಡಿಸಿದ್ದೇನೆ. ಇಷ್ಟೆಲ್ಲ ಮಾಡಿದರೂ ತಡರಾತ್ರಿ ಕಾಲ್ ಮಾಡಿ ಧಮ್ಕಿ ಹಾಕಿದ್ದಾನೆ. ಕೇಳಿದಷ್ಟು ದುಡ್ಡು ಕೊಡು ಇಲ್ಲಾ ಮುಗಿಸ್ತೀನೆಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ನನ್ನ ಹಾಗೂ ಪದ್ಮರಾಜ್ ನಡುವೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ, ಈ ಹಿಂದೆಯೂ ಪದ್ಮರಾಜ್ ಇದೇ ರೀತಿ ಮಾಡಿದ್ದ ಎಂದು ಆರೋಪಿಸಿದ್ದಾರೆ.
BJP MLA Gopaliah gets threat from corporater Padmaraj in Bangalore. A complaint even to Speaker UT Khader has been made by Gopaliah.
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm