ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm