ಬ್ರೇಕಿಂಗ್ ನ್ಯೂಸ್
16-02-24 11:11 am Bangalore Correspondent ಕರ್ನಾಟಕ
ಬೆಂಗಳೂರು, ಫೆ.16: 15ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಇಂದು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಎರಡನೇ ಅವಧಿಯ ಮೊದಲ ಪೂರ್ಣಕಾಲಿಕ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಸೂಟ್ಕೇಸ್ಗೆ ಬೈ ಹೇಳಿದ್ದು, ಲೀಡ್ಕರ್ ಸಂಸ್ಥೆಯ ಚರ್ಮದ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಗಮನ ಸೆಳೆದಿದ್ದಾರೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ 2024ರ ರಾಜ್ಯ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತೆರಳಿದ್ದಾರೆ. ಹಳೆಯ ಸಾಂಪ್ರದಾಯಿಕ ಬಜೆಟ್ಗೆ ಮುಕ್ತಿ ನೀಡಿರುವ ಸಿಎಂ, ಈ ಬಾರಿ ವಿಭಿನ್ನ ರೀತಿಯ ಬಜೆಟ್ ಮಂಡನೆ ಸಿದ್ಧರಾಗಿದ್ದಾರೆ. ಪ್ರತಿ ಬಾರಿ ಬಜೆಟ್ ದಾಖಲೆಗಳನ್ನು ಕೊಂಡೊಯ್ಯಲು ಬ್ರೀಫ್‌ಕೇಸ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಈ ಬಾರಿಯ ದಾಖಲೆಗಳನ್ನು ಕೊಂಡೊಯ್ಯಲು ಲೆದರ್ ಬ್ಯಾಗ್ ಬಳಸಲಾಗುತ್ತಿದೆ. ಲೆದರ್ ಬ್ಯಾಗ್ ಸಹಿತ ಸಿಎಂ ಫೋಟೋಗಳು ಫೋಸ್ ನೀಡಿದ್ದಾರೆ.
14 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಿ, ಅಭಿವೃದ್ಧಿಗೂ ಹಣಕಾಸು ಕೊರತೆಯಾಗದ ರೀತಿ ಹೊರೆ ಇಲ್ಲದ ಉಳಿತಾಯ ಲೆಕ್ಕ ಪತ್ರ ಮಂಡನೆ ಮಾಡಲು ಸಜ್ಜಾಗಿದ್ದಾರೆ.
Karnataka Chief Minister Siddaramaiah faces challenges as he presents the State Budget on Friday, aiming to fulfil election promises amid increasing criticism from the Opposition and disputes with the central government over tax allocation.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm