ಬ್ರೇಕಿಂಗ್ ನ್ಯೂಸ್
19-02-24 03:41 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸರ್ಕಾರಿ ಶಾಲೆಗಳಲ್ಲಿ 'ಧ್ಯೇಯ ವಾಕ್ಯ' ಬದಲಾವಣೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಿಡಿಕಾರಿದ್ದು, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಟೀಕಿಸಿದೆ.
ಸರ್ಕಾರಿ ಶಾಲೆಗಳಲ್ಲಿ 'ಜ್ಞಾನ ದೇಗುಲವಿದು.. ಕೈ ಮುಗಿದು ಒಳಗೆ ಬಾ' ಎಂಬ ಧ್ಯೇಯವಾಕ್ಯವನ್ನು 'ಜ್ಞಾನ ದೇಗುಲವಿದು.. ಧೈರ್ಯವಾಗಿ ಪ್ರಶ್ನಿಸು' ಎಂಬುದಾಗಿ ಬದಲಾಯಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ರೀತಿಯ ಬೋರ್ಡ್ ಕಾಣಿಸಿಕೊಂಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಕುವೆಂಪು ಅವರ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂಬ ಧ್ಯೇಯ ವಾಕ್ಯವನ್ನು ಕಾಂಗ್ರೆಸ್ ಸರ್ಕಾರ ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು ಬದಲಾಯಿಸಿದೆ. ಈ ಮೂಲಕ ಹಿಂದುಳಿದ ಬಡ ವಿದ್ಯಾರ್ಥಿಗಳು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ವಿರೋಧಿಸುವಂತೆ ವಿಷ ಬೀಜ ಬಿತ್ತಿ, ಎಡಬಿಡಂಗಿ ಸಿದ್ಧಾಂತವನ್ನು ಹೇರಲಾಗುತ್ತಿದೆ ಎಂದು ಹೇಳಿದೆ.
ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಹಿಂದುಳಿದ, ದಲಿತ ಬಡ ಮಕ್ಕಳಿಗೆ ಮದರಸಾ ಶಿಕ್ಷಣ ನೀಡಿ ಬೀದಿಗೆ ಬಿಟ್ಟು ಪಿಎಫ್ಐ ಗೂಂಡಾಗಳಂತೆ ಕಲ್ಲು ತೂರಿಸಲು ಪ್ರಚೋದನೆ ಕೊಡುವ ಉದ್ದೇಶದ ಮೊದಲ ಹಂತವೇ ಇದು! "ತಾಲಿಬಾನ್ ಮಾಡೆಲ್" ಅನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಿದ್ದರಾಮಯ್ಯ ಅವರು ಹಂತ ಹಂತವಾಗಿ ಮುನ್ನುಡಿ ಇಟ್ಟಿದ್ದಾರೆ. ಬಡವರ ಮಕ್ಕಳನ್ನು ಹಳ್ಳಕ್ಕೆ ದೂಡಿ ಮಜಾ ತೆಗೆದುಕೊಳ್ಳುವುದೇ ಮಜಾವಾದಿ ಸರ್ಕಾರದ ಹಿಡನ್ ಅಜೆಂಡಾ! ಎಂದು ಕಿಡಿಕಾರಿದೆ
The state government's move to change the 'motto' in government schools has evoked strong reactions. The opposition BJP has slammed the move, saying the 'motto' has been changed to brainwash poor school children.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am