ಬ್ರೇಕಿಂಗ್ ನ್ಯೂಸ್
            
                        25-11-20 02:26 pm Bangalore Correspondent ಕರ್ನಾಟಕ
            ಬೆಂಗಳೂರು, ನ. 25: ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ಯಾರು ನೇಮಕವಾಗುತ್ತಾರೆ ಎಂಬ ವಿಚಾರ ತೀವ್ರ ಕುತೂಹಲ ಮೂಡಿಸಿತ್ತು.
ಇದೀಗ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕವಾಗುವ ಮೂಲಕ ಅದಕ್ಕೆ ತೆರೆ ಬಿದ್ದುದ್ದು, ಭೃಂಗೀಶ್ ಅವರನ್ನು ತಮ್ಮ ಮಾಧ್ಯಮ ಸಲಹೆಗಾರರನ್ನಾಗಿ ನೇಮಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಾರ್ತಾ ಇಲಾಖೆಯಲ್ಲಿ ಸುದೀರ್ಘ 30 ವರ್ಷಗಳ ಸೇವೆಯ ಬಳಿಕ ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ತಮ್ಮ 30 ವರ್ಷಗಳ ಸೇವೆಯಲ್ಲಿ 25 ವರ್ಷಗಳಷ್ಟು ಸುಧೀರ್ಘವಾಗಿ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಭೃಂಗೀಶ್ ಅವರು ಸೇವೆ ಸಲ್ಲಿಸಿದ್ದಾರೆ.
1990ರಲ್ಲಿ ರಾಜ್ಯ ವಾರ್ತಾ ಇಲಾಖೆ ಸೇರಿದ್ದ ಭೃಂಗೀಶ್ ಅವರು 10ಕ್ಕೂ ಹೆಚ್ಚು ಮುಖ್ಯಮಂತ್ರಿಗಳಿಗೆ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಕೆಲ ದಿನಗಳ ಹಿಂದಷ್ಟೆ ಮಹಾದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದರು.
            
            
            Former Director of Information and Publicity Department N Bhrungeesh has been appointed as the new media advisor to Chief Minister (CM) B S Yediyurappa.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm