ಬ್ರೇಕಿಂಗ್ ನ್ಯೂಸ್
26-02-24 08:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕೊಳಕು ಬಟ್ಟೆಗಳನ್ನು ಧರಿಸಿದ್ದಾನೆಂದು ರೈತರೊಬ್ಬರನ್ನು ಮೆಟ್ರೋ ರೈಲಿನಲ್ಲಿ ಪ್ರಯಾಣಿಸದಂತೆ ತಡೆದು ಅವಮಾನ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ದುರ್ನಡತೆ ತೋರಿದ ಬೆಂಗಳೂರು ಮೆಟ್ರೋ ಭದ್ರತಾ ಮೇಲ್ವಿಚಾರಕನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಪ್ರಯಾಣಕ್ಕೆ ಸೂಕ್ತವಲ್ಲದ, ಕೊಳಕು ಬಟ್ಟೆಗಳನ್ನು ಧರಿಸಿದ್ದ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬಂದಿ ರೈತನನ್ನು ತಡೆದಿದ್ದಾರೆ. ಇದೇ ವೇಳೆ ಜೊತೆಗಿದ್ದ ಇತರೇ ಪ್ರಯಾಣಿಕರು ಭದ್ರತಾ ಸಿಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿಭಾರೀ ಆಕ್ರೋಶ ಕೇಳಿಬಂದಿತ್ತು. ತನಿಖೆ ನಡೆಸಿದ ಮೆಟ್ರೋ ರೈಲು ಪ್ರಾಧಿಕಾರವು ಆರೋಪಿತ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಿದೆ.

ಹಳೆಯ ಬಿಳಿ ಅಂಗಿ ಧರಿಸಿ ತಲೆಯ ಮೇಲೆ ಬಟ್ಟೆಯ ಮೂಟೆ ಹೊತ್ತು ಬಂದಿದ್ದ ರೈತನನ್ನು ರಾಜಾಜಿನಗರ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣಾ ಕೇಂದ್ರದ ಬಳಿ ಟಿಕೆಟ್ ಹೊಂದಿದ್ದರೂ ತಡೆದು ನಿಲ್ಲಿಸಲಾಗಿತ್ತು. ಭದ್ರತಾ ಚೆಕ್ ಪಾಯಿಂಟ್‌ನಲ್ಲಿ ಲಗೇಜ್ ಸ್ಕ್ಯಾನರ್ ಬಳಿ ಹಿಂದಿ ಮಾತನಾಡುತ್ತ ರೈತ ನಿಂತಿರುವುದು ಕಂಡುಬಂದಿದೆ. ಕಾರ್ತಿಕ್ ಎಂಬ ವ್ಯಕ್ತಿ ರೈತನ ಮೆಟ್ರೋ ಪ್ರಯಾಣವನ್ನು ತಡೆದ ಕ್ರಮದ ಬಗ್ಗೆ ಸಿಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ರೈತನಿಗೆ ಮೆಟ್ರೋ ಹತ್ತಲು ಅವಕಾಶ ನೀಡಲಾಗಿತ್ತು. ಘಟನೆ ಕುರಿತು ಪ್ರತಿಕ್ರಿಯಿಸಿದ ಬಿಎಂಆರ್‌ಸಿಎಲ್, ರೈತರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ.
A farmer was not allowed to use the Namma Metro in Bengaluru after security personnel stopped him when they found his clothes to be "unsuitable" for travel. A security supervisor has been sacked after the incident triggered an uproar on social media.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm