ಬ್ರೇಕಿಂಗ್ ನ್ಯೂಸ್
27-02-24 11:00 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯ ಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ.
ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 47, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.
ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದರಿಂದ ಕುತೂಹಲ ಶುರುವಾಗಿತ್ತು. ಕಾಂಗ್ರೆಸ್‌ಗೆ ಬೇಕಿದ್ದ ಮತಗಳು ಸರಿಯಾಗಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿತ್ತು. ಕಾಂಗ್ರೆಸ್‌ನಿಂದ ಆತ್ಮಸಾಕ್ಷಿಯ ಮತಗಳು ಬರಲಿವೆ. ತಾವು ಗೆದ್ದೇ ಗೆಲ್ಲುವುದಾಗಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸಹಿತ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ಹೇಳುತ್ತಿದ್ದರು. ಇದು ಕಾಂಗ್ರೆಸ್ ಆತಂಕವನ್ನು ಹೆಚ್ಚಿಸಿತ್ತು. ಆದರೆ ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ. ಬಿಜೆಪಿಯ ರೆಬೆಲ್ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮತದಾನಕ್ಕೇ ಬಾರದೇ ದೂರವುಳಿದರು. ಇದು ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಮುಖಭಂಗ ಆದಂತಾಗಿದೆ.
The Rajya Sabha elections for four seats from Karnataka is being keenly watch with the entry of a fifth candidate for the four seats in the state. The entry of multi-millionaire real estate baron, D Kupendra Reddy, a Janata Dal (Secular)-BJP candidate has turned the elections to the fourth seat into a keen contest.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm