ಬ್ರೇಕಿಂಗ್ ನ್ಯೂಸ್
28-02-24 04:25 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 28: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್ ನಾಯಕರ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಜೈಕಾರ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಘೋಷಣೆ ಕುಗಿದ್ದಾರ ಎನ್ನೋದು ಮೊದಲು ತನಿಖೆ ಯಾಗಬೇಕು. ಈಗಾಗಲೇ FSL ತನಿಖೆಗೆ ಕೊಟ್ಟಿದ್ದೇವೆ. ಘೋಷಣೆ ಕೂಗಿದ್ದೇ ಆದರೆ ಕ್ರಮ ತೆಗೆದುಕೊಳ್ತೇವೆ. ಯಾರೇ ಆಗಿರಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ, ದೇಶದ್ರೋಹಿಗಳನ್ನ ಮಟ್ಟ ಹಾಕಬೇಕಿದೆ ಎಂದು ತಿಳಿಸಿದ್ದಾರೆ.
ನಿಜವಾದರೆ ಅದನ್ನು ತೀವ್ರವಾಗಿ ಖಂಡಿಸುತ್ತೇನೆ ;
ಇತ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಸ್ಪೀಕರ್ ಯೂ ಟಿ ಖಾದರ್ ಖಂಡನೆ ಮಾಡಿದ್ದು, ನಿನ್ನೆ ರಾಜ್ಯಸಭೆ ಚುನಾವಣೆ ಬಳಿಕ, ಮಾಧ್ಯಮಗಳ ಮೂಲಕ ಘಟನೆ ತಿಳಿದು ಬಂದಿದೆ. ಅದು ನಿಜವಾದರೆ ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾರೇ ಆದರೂ ಸರಿಯೇ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ನನ್ನ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ, ಇದರ ಬಗ್ಗೆ ಸೂಕ್ತ ತನಿಖೆ ಮಾಡಿ ಅತ್ಯಂತ ಕಠಿಣ ಶಿಕ್ಷೆ ಕೊಡಬೇಕು. ನಾನು ಸಿಎಂ ಹಾಗೂ ಗೃಹ ಸಚಿವರಿಗೆ ಸೂಚನೆ ಕೊಡುತ್ತೇನೆ ಎಂದು ತಿಳಿಸಿದರು.
ಅವರು ಮಾಡಲಿ, ನಾವು ತಪ್ಪು ಅಂತ ಹೇಳಲ್ಲ ;
ಅಲ್ಲದೇ, ಪೊಲೀಸರ ಮಾಡಿರೋ ಚಿತ್ರೀಕರಣ, ವಿಧಾನಸೌಧ ಸಿಸಿ ಕ್ಯಾಮರಾ ಎಲ್ಲವನ್ನು ಪಡೆದು ತನಿಖೆ ಮಾಡ್ತೇವೆ. ಕೆಲವರು ನಾಸಿರ್ ಸಾಬ್ ಅಂತಾರೆ, ಕೆಲವರು ಪಾಕಿಸ್ತಾನ ಅಂತಾರೇ. ಇದರ ಸತ್ಯತೆ ವೈಜ್ಞಾನಿಕವಾಗಿ ತಿಳಿಯಬೇಕು ಅಂತ ಎಫ್ಎಸ್ ಎಲ್ ಗೆ ಕಳುಹಿಸುತ್ತಿದ್ದೇವೆ. ಒಂದು ವೇಳೆ ಕೂಗಿದ್ರೆ ಕಾನೂನು ಕ್ರಮ ಆಗೇ ಆಗುತ್ತೆ. ಸದನ ಒಳಗೆ ಹೊರಗೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವು ತಪ್ಪು ಅಂತ ಹೇಳಲ್ಲ. ಕಾನೂನು ಚೌಕಟ್ಟಿನಲ್ಲಿ ಮಾಡಲಿ. ಇದರಲ್ಲಿ ಕಾಂಗ್ರೆಸ್ ತಪ್ಪೇನಿದೆ. ಮುಸ್ಲಿಂ ತುಷ್ಟೀಕರಣ ಮಾಡ್ತಾರೆ ಅಂತ ಹೇಳ್ತಾನೆ ಬಂದಿದ್ದಾರೆ, ಹೊಸದೇನು ಅಲ್ಲ ಎಂದರು. ಆದರೆ ನಾಸೀರ್ ಹುಸೇನ್ ಪತ್ರಕರ್ತರ ಮೇಲೆ ದೂಂಡ ವರ್ತನೆ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ, ಅವರು ಏನ್ ಹೇಳಿದ್ದಾರೆ ಅಂತ ನೋಡಿಲ್ಲ ನಾನು. ನೋಡಿ ಅಮೇಲೆ ಹೇಳ್ತಿನಿ ಎಂದಷ್ಟೇ ತಿಳಿಸಿದರು.
As the BJP staged a protest outside the Karnataka Assembly on Wednesday alleging that Congress supporters had raised ‘Pakistan Zindabad’ slogans on Tuesday after their candidate Syed Nasir Hussain’s victory in the Rajya Sabha polls, Chief Minister Siddaramaiah said “strict action will be taken” if the allegations were proven true.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm