ಬ್ರೇಕಿಂಗ್ ನ್ಯೂಸ್
04-03-24 03:27 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸಿನ ನಾಸಿರ್ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ 'ಪಾಕಿಸ್ತಾನ ಜಿಂದಾಬಾದ್ ಘೋಷಣೆ' ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ “ವಿಧಾನಸೌಧ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಬಹಿರಂಗವಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೇಳಬೇಕು” ಎಂದು ಹೇಳಿದೆ. ಆದರೆ ಈ ವರದಿಯನ್ನು ಸಂವಾದ ಫೌಂಡೇಶನ್ ಎಂಬ ಖಾಸಗಿ ಸಂಸ್ಥೆ ತಯಾರಿಸಿದೆ ಎಂದು ಹೇಳಲಾಗುತ್ತಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸಬೇಕಿದೆ ಎಂಬ ಮಾತು ಕೇಳಿಬಂದಿದೆ.
ವರದಿ ಬಂದ ಬಳಿಕ ಕ್ರಮ ಎಫ್‌ಎಸ್‌ಎಲ್ ವರದಿ ಇನ್ನಷ್ಟೇ ಬರಬೇಕಿದೆ. ಆದಷ್ಟು ಬೇಗ ವರದಿ ಕೇಳಿದ್ದೇವೆ. ಇದರಲ್ಲಿ ಮುಚ್ಚಿಡುವಂಥದ್ದೇನಿಲ್ಲ, FSL ಗೆ ನೀಡಲಾದ ವೀಡಿಯೊಗಳು ಒಂದು ಚಾನಲ್ ಅಥವಾ ಒಂದು ಕ್ಲಿಪ್‌ನಿಂದ ಅಲ್ಲ. ಹಲವಾರು ಕ್ಲಿಪ್ಪಿಂಗ್‌ಗಳನ್ನು ಭದ್ರಪಡಿಸಿ ಎಫ್‌ಎಸ್‌ಎಲ್‌ಗೆ ನೀಡಲಾಗಿದೆ. ವರದಿ ಬರಬೇಕಿದ್ದು, ವರದಿ ಬಂದ ಬಳಿಕ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಪ್ರಕರಣ ಸಂಬಂಧಿಸಿ ಏಳು ಮಂದಿಯನ್ನು ಕರೆಸಿ ಹೇಳಿಕೆ ಪಡೆಯಲಾಗಿದೆ. ಜೊತೆಗೆ ಅವರ ಧ್ವನಿ ಮಾದರಿಗಳನ್ನು ಕ್ಲಿಪ್‌ನಲ್ಲಿ ಹೋಲಿಸಲು ದಾಖಲು ಮಾಡಿಕೊಳ್ಳಲಾಗಿದೆ. ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಧ್ವನಿ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬಂದ ನಂತರ ನಾವು ಮುಂದಿನ ತನಿಖೆಯ ಬಗ್ಗೆ ತಿಳಿಸುತ್ತೇವೆ ಎಂದಿದ್ದಾರೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
— BJP Karnataka (@BJP4Karnataka) March 4, 2024
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
The Bharatiya Janata Party (BJP) on Tuesday said that the Forensic Science Laboratory (FSL) examination has confirmed that supporters of Congress leader Nasir Hussain, who won the Rajya Sabha elections, raised 'Pakistan Zindabad slogans' during celebrations in the Vidhana Soudha premises.
26-02-26 12:58 pm
HK News Staffer
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 04:45 pm
HK News Staffer
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm