ಬ್ರೇಕಿಂಗ್ ನ್ಯೂಸ್
06-03-24 03:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಮೈತ್ರಿ ನಾಯಕರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.
ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುವುದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರು ಟಾರ್ಗೆಟ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ - ಜೆಡಿಎಸ್ ನಾಯಕರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಗೆದ್ದು ಡಿ.ಕೆ ಶಿವಕುಮಾರ್ ಅವರಿಗೆ ಠಕ್ಕರ್ ಕೊಡಲು ಡಾ.ಸಿ.ಎನ್ ಮಂಜುನಾಥ್ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನ ಡಿ.ಕೆ. ಸುರೇಶ್ ಹಾಲಿ ಸಂಸದರಾಗಿದ್ದು ಅವರೇ ಮತ್ತೆ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಇದೊಂದೇ ಕ್ಷೇತ್ರದಲ್ಲಿ ಲೋಕಸಭೆ ಸ್ಥಾನ ಗೆದ್ದಿದ್ದು ಪಕ್ಷದ ಪಾಲಿಗೆ ಮರ್ಯಾದೆ ಉಳಿಸಿಕೊಟ್ಟ ಕ್ಷೇತ್ರವೂ ಆಗಿದೆ. ಹೀಗಾಗಿ ಬಿಜೆಪಿ ಪಾಲಿಗೆ ಈ ಕ್ಷೇತ್ರ ಹೆಚ್ಚು ಸವಾಲಿನದ್ದೂ ಆಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಸಿದ್ಧತೆ ಮತ್ತು ಅಭ್ಯರ್ಥಿ ಆಯ್ಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಮೈತ್ರಿಕೂಟದ ನಾಯಕರ ಜತೆ ಮಂಗಳವಾರ ರಾತ್ರಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಗಡಿ ಮಾಜಿ ಶಾಸಕ ಮಂಜುನಾಥ್, ಗೊಟ್ಟಿಗೆರೆ ಮಂಜುನಾಥ, ಕುಣಿಗಲ್ ಜಗದೀಶ್, ನಾಗರಾಜ್ ಕನಕಪುರ, ಸಿದ್ದಮರೀ ಗೌಡ ಕನಕಪುರ, ಜಯಮುತ್ತು, ಗೌತಮ್, ಪ್ರಸಾದ್ ಗೌಡ, ಕೃಷ್ಣಕುಮಾರ್, ಕೆ.ಪಿ.ರಾಜು, ಡಾ.ನಾರಾಯಣಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ನಾಯಕರು ಭಾಗಿಯಾಗಿದ್ದರು.
ಕೇಂದ್ರ ನಾಯಕರ ಜೊತೆ ಚರ್ಚೆ ನಡೆಸಿದ ನಂತರ ಅಭ್ಯರ್ಥಿ ಘೋಷಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದ್ದಾರೆ. ಯಾರೇ ಅಭ್ಯರ್ಥಿ ಆದರೂ ಅವರು ಎನ್ ಡಿಎ ಅಭ್ಯರ್ಥಿ ಆಗಿರುತ್ತಾರೆ, ಅವರು ನಮ್ಮ ಒಮ್ಮತದ ಅಭ್ಯರ್ಥಿ ಆಗಿರುತ್ತಾರೆ ಎಂದ ಹೆಚ್ಡಿಕೆ, ನಾವೆಲ್ಲರೂ ಮೈತ್ರಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಲು ಶ್ರಮಿಸಬೇಕು ಎಂದು ಹೇಳಿದರು.
Dr C N Manjunath for Bangalore rural Mp seat almost finalised by BJP to give counter to D K shivakumar. Among the names doing the rounds for this “switch” agreement is C N Manjunath, the 66-year-old son-in-law of former Prime Minister H D Deve Gowda. Manjunath, who recently retired from the Jayadeva Institute of Cardiovascular Sciences and Research after heading it for 18 years, is likely to be fielded as the BJP candidate from either Bangalore North or Bangalore Rural seat
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am