ಬ್ರೇಕಿಂಗ್ ನ್ಯೂಸ್
09-03-24 01:00 pm HK News Desk ಕರ್ನಾಟಕ
ಬೆಳಗಾವಿ, ಮಾ.9: ನನ್ನ ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೀತಿದೆ ಎಂದು ಬೆಳಗಾವಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಪದೇ ಪದೇ ವಿರೋಧ ವ್ಯಕ್ತವಾಗಿರುವುದು ಮತ್ತು ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ದೂರು ನೀಡಿರುವುದರಿಂದ ಕೇಂದ್ರ ನಾಯಕರು ಎರಡನೇ ಬಾರಿಗೆ ಮರು ಯೋಚನೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳ್ತಾರೆ. ಈಗ ಶೋಭಾಗೆ ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ.
ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳೇನೆಂದು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ ಎಂದು ಹೇಳಿದರು.
ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಕ್ಷೇತ್ರದ ಬಗ್ಗೆ ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ.
ಇದು ಎಲ್ಲರಿಗೂ ಅನ್ವಯ ಆಗುತ್ತದೆ, ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ಆಗಲಿದೆ. ಇಂತಹ ಪಿತೂರಿ ಮಾಡಿದಾಗಲೇ ಹೈಕಮಾಂಡ್ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇನೆ ಎಂದು ಹೇಳಿದರು.
BJP members are conspiring against me to miss my MP ticket says Shobha Karandlaje in belegavi but at any cost I will see that I will get my MP ticket done for Udupi Chikmagalur constituency
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm