ಬ್ರೇಕಿಂಗ್ ನ್ಯೂಸ್
11-03-24 10:31 pm HK News Desk ಕರ್ನಾಟಕ
ಮೈಸೂರು, ಮಾ 11: ನರೇಂದ್ರ ಮೋದಿ ಹೆಸ್ರಲ್ಲಿ ನಾನು ಎರಡು ಬಾರಿ ಗೆದ್ದಿರುವೇ, ಮೋದಿ ಅವರು ನನ್ನ ಪಾಲಿಗೆ ದೇವರು ಇದ್ದಂಗೆ. ಅವರು ಯಾರಿಗೆ ಟಿಕೆಟ್ ಕೊಡುತ್ತಾರೋ ಅದಕ್ಕೆ ನಾವೆಲ್ಲ ಬದ್ಧರಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು ಮನಮದುರೈ ನೂತನ ರೈಲಿಗೆ ಚಾಲನೆ ನೀಡಿ ಪ್ರತಿಕ್ರಿಯಿಸಿದ ಅವರು, ಮೋದಿ ನಾಮ ಬಲದಿಂದ ನಾನು ಎರಡು ಬಾರಿ ಗೆದ್ದಿದ್ದೇನೆ. ಮೂರನೇ ಬಾರಿಯೂ ಕೂಡ ಮೋದಿ ಹೆಸರಿನಲ್ಲೇ ಗೆಲ್ಲುತ್ತೇನೆ. ಮೈಸೂರು ಅಧಿದೇವತೆ ಚಾಮುಂಡೇಶ್ವರಿ ತಾಯಿ, ಕರುನಾಡಿನ ಕಾವೇರಿ ತಾಯಿ ಹಾಗೂ ಮೋದಿಜಿ ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದರು.
ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳೇ ಇಲ್ಲ
ರಾಜ್ಯದಲ್ಲಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಲೋಕಸಭೆ ಅಭ್ಯರ್ಥಿಗಳೇ ಇಲ್ಲ. ಆದರೂ ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ಗಾಗಿ ಹೊಡೆದಾಟ ನಡೆಯುತ್ತಿರುವಾಗ, ಗೆಲ್ಲುವ ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಇದ್ದೇ ಇರುತ್ತಾರೆ. ಯಾರು ಅಭ್ಯರ್ಥಿಗಳು ಎಂಬುದನ್ನ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷದ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿ ಇರಬೇಕು. ಮೈಸೂರಿನಲ್ಲಿ ಬಿಜೆಪಿ ಗೆಲುವಿಗೆ ಮೋದಿಜಿ ಅವರ ಯೋಜನೆ ಮುಖಾಂತರ ನಾನು ಕೆಲಸ ಮಾಡಿದ್ದೇನೆ. ಕಳೆದ ಹತ್ತು ವರ್ಷದಿಂದ ಮೈಸೂರು - ಕೊಡಗು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿ ಬಿಜೆಪಿ ಭದ್ರಕೋಟೆಯನ್ನಾಗಿ ಮಾಡಿದ್ದೇನೆ ಎಂದು ಹೇಳಿದರು.
ಚುನಾವಣೆ ಎಂದರೆ ಹಲವು ಆಕಾಂಕ್ಷಿಗಳು ಇರುತ್ತಾರೆ. ಕಾರ್ಯಕರ್ತರಿಗೆ ಮತ್ತು ಪಕ್ಷದ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕು ಇರುತ್ತದೆ. ಅಂತಿಮವಾಗಿ ನಮ್ಮ ರಾಜ್ಯ ನಾಯಕರು, ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರು, ರಾಜ್ಯಾಧ್ಯಕ್ಷರು ಹಾಗೂ ಸಂಘದ ಅಭಿಪ್ರಾಯ ಜೊತೆಗೆ ನರೇಂದ್ರ ಮೋದಿ, ಕೇಂದ್ರ ಚುನಾವಣಾ ಸಮಿತಿ ನಮ್ಮ ಕೆಲಸ ನೋಡಿ ಟಿಕೆಟ್ ನೀಡುತ್ತಾರೆ ಎಂದರು.
ಮೋದಿಜಿ ಹೊರತಾಗಿ ನಾನು ಏನೇನೂ ಅಲ್ಲ
ಪ್ರತಾಪ್ ಸಿಂಹ ವಿಥೌಟ್ ಮೋದಿ ಜೀರೋ, ಮೋದಿಜಿ ಹೆಸರಿನಿಂದಲೇ ಗೆದ್ದಿರುವವನು, ಅವರು ಕೊಟ್ಟ ಯೋಜನೆಗಳನ್ನೇ ನನ್ನ ಕ್ಷೇತ್ರಕ್ಕೆ ತಂದಿರುವುದು. ಮೋದಿಜಿ ಹೊರತಾಗಿ ನಾನು ಏನೇನೂ ಅಲ್ಲ. ಪಕ್ಷ ಮತ್ತು ಕಾರ್ಯಕರ್ತರು ನನ್ನನ್ನು ಮೋದಿಜಿ ಅವರಿಗೋಸ್ಕರ ಇಲ್ಲಿವರೆಗೂ ಬೆಳೆಸಿದ್ದಾರೆ. ಪಕ್ಷದ ವಿಶ್ವಾಸ ನನ್ನ ಮೇಲೆ ಇದೆ ಎಂದು ನನಗೆ ಖಚಿತವಾಗಿ ಗೊತ್ತಿದೆ. ಆದ್ದರಿಂದ ನಮ್ಮ ಕೇಂದ್ರ ಮತ್ತು ರಾಜ್ಯದ ನಾಯಕರು ಒಳ್ಳೆಯ ಸುದ್ದಿಯನ್ನು ಕೊಡುತ್ತಾರೆ ಎಂದು ನನಗೆ ವಿಶ್ವಾಸ ಇದೆ ಎಂದರು.
Mysuru mp Prathap simha says Modi is my god, confident of getting mp ticket for the third time.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm