ಬ್ರೇಕಿಂಗ್ ನ್ಯೂಸ್
12-03-24 03:15 pm HK News Desk ಕರ್ನಾಟಕ
ಮೈಸೂರು, ಮಾ 12: ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಆತಂಕದಲ್ಲಿರುವ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೋಮವಾರ ತಡರಾತ್ರಿ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಕ್ಷೇತ್ರದ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ. ಕೊಡಗಿನ ಜನ ತೋರಿಸಿದ ಪ್ರೀತಿಯನ್ನು ಮರೆಯಲಾರೆ. ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದೀರಿ ಎಂದು ಭಾವುಕರಾದರು.
ಸ್ವಾರ್ಥಕ್ಕಾಗಿ ಯಾರ ಮನೆ ಬಾಗಿಲನ್ನೂ ನಾನು ತಟ್ಟಿಲ್ಲ. ಟಿಕೆಟ್ ಸಿಗುತ್ತೋ, ಸಿಗಲ್ವೋ ಚಾಮುಂಡಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದ ಸಿಂಹ, 10 ವರ್ಷಗಳ ರಾಜಕಾರಣದ ಬಗ್ಗೆ ಸುದೀರ್ಘ ಮಾತುಗಳನ್ನಾಡಿದರು.
ಮಡಿಕೇರಿಯ ಜನರು ನೇರ ಹಾಗೂ ನಿಷ್ಠುರವಾದಿಗಳು. ಆದರೆ, ಮೈಸೂರು ಜನ ರಾಜಕಾರಣ ಮಾಡುವವರು. ಮೈಸೂರಿನಲ್ಲಿರುವಷ್ಟು ರಾಜಕಾರಣ ಎಲ್ಲಿಯೂ ಇಲ್ಲ. ಜನರ ಮಧ್ಯೆ ಇರುವವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರು ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲಸಲ್ಲದ ಆರೋಪ ಮಾಡುತ್ತೀರಿ? ನನ್ನ ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ.
ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವವರೆಗೂ ಇರುತ್ತೇನೆ ಎಂದು ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್ ಕೊಡಬೇಕೆಂದು ನಿರೀಕ್ಷಿಸಿದ್ದೆ. ಆದರೆ, ರಾಜಕಾರಣದಲ್ಲಿ ಏನಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ, ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ, ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟು ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಪ್ರತಾಪ್ ಸಿಂಹ ಹೇಳಿದರು.
Mysuru Mp Prathap Simha cries out during Facebook live over ticket missing, says thanks to all for your love and support. Can't predict anything in politics he added.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm