ಬ್ರೇಕಿಂಗ್ ನ್ಯೂಸ್
12-03-24 08:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಉಡುಪಿ ಜಿಲ್ಲೆಯ ಪ್ರಭಾವಿ ನಾಯಕ ಕೆ. ಜಯಪ್ರಕಾಶ ಹೆಗ್ಡೆಯವರು ಕಡೆಗೂ ಕಾಂಗ್ರೆಸ್ ಪಕ್ಷವನ್ನು ಅಧಿಕೃತ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ನಾಯಕರನ್ನು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಹಿರಿಯ ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ ಜಾರ್ಜ್, ಲಕ್ಷ್ಮೀ ಹೆಬ್ಬಾಳ್ಕರ್ , ಉಡುಪಿ ಮತ್ತು ಚಿಕ್ಕಮಗಳೂರಿನ ಹಲವು ನಾಯಕರು ಪಾಲ್ಗೊಂಡಿದ್ದರು.


ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ನೇರ ನಡೆನುಡಿಯ ಸರಳ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯಲ್ಲಿ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಆನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು. ಹಿಂದೆ ಜನತಾ ಪರಿವಾರದಲ್ಲಿದ್ದಾಗ ಜಯಪ್ರಕಾಶ್ ಹೆಗ್ಡೆ, ಸಿದ್ದರಾಮಯ್ಯ ಆಪ್ತರಾಗಿದ್ದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆಶಿ ಸಾರಥ್ಯದಲ್ಲಿ ಮತ್ತೆ ಕಾಂಗ್ರೆಸ್ ಪಾಳಯ ಸೇರಿದ್ದು ಉಡುಪಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಮತ್ತೊಮ್ಮೆ ಲೋಕಸಭೆ ಅಭ್ಯರ್ಥಿಯಾಗೋದು ಖಚಿತವಾಗಿದೆ.
Jayaprakash Hegde joins congress party. Former minister and BJP leader K. Jayaprakash Hegde has returned to the Congress on Tuesday at the Karnataka Pradesh Congress Committee (KPCC) office in Bengaluru. According to sources, Hegde is likely the grand old party’s frontrunner for the Udupi-Chikkamagaluru constituency seat for the upcoming Lok Sabha elections.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm