ಬ್ರೇಕಿಂಗ್ ನ್ಯೂಸ್
14-03-24 03:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.14: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಲೋಕಸಭೆ ಕ್ಷೇತ್ರಗಳನ್ನು ಅಂತಿಮಗೊಳಿಸಿದೆ. ಕೋಲಾರ, ಮಂಡ್ಯ, ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿದೆ.
ಜೆಡಿಎಸ್ ಕನಿಷ್ಠ ಐದು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿತ್ತು. ಆದ್ರೆ, ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಅಂತಿಮವಾಗಿ ಜೆಡಿಎಸ್ಗೆ ನಿರೀಕ್ಷೆಯಂತೆ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಹಾಸನದಲ್ಲಿ ಈಗಾಗಲೇ ಜೆಡಿಎಸ್ನ ಪ್ರಜ್ವಲ್ ರೇವಣ್ಣ ಸಂಸದರಿದ್ದು, ಅವರೇ ಮತ್ತೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಸಂಸದೆ ಸುಮಲತಾ ಪ್ರತಿನಿಧಿಸುತ್ತಿದ್ದ ಮಂಡ್ಯವನ್ನು ಜೆಡಿಎಸ್ ಮರಳಿ ಭದ್ರಕೋಟೆಯಾಗಿದ್ದ ಯಶಸ್ವಿಯಾಗಿದೆ. ಬಿಜೆಪಿ ಹಾಲಿ ಸಂಸದ ಇರುವ ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿಗೆ ಈ ಬಾರಿ ಟಿಕೆಟ್ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಇನ್ನು ಮಂಡ್ಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ಗೆ ನಿರಾಸೆಯಾಗಿದ್ದು, ಅವರು ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಜೆಡಿಎಸ್ ಮಂಡ್ಯ ಕ್ಷೇತ್ರದಿಂದ ಸಿಎಸ್ ಪುಟ್ಟರಾಜು ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಖುದ್ದು ಕುಮಾರಸ್ವಾಮಿ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್ ಹೇಳಿತ್ತು. ಆದ್ರೆ, ಎಚ್ಡಿಕೆ ಪುಟ್ಟರಾಜು ಅವರನ್ನ ಅಂತಿಮಗೊಳಿಸಿದ್ದಾರೆ. ಹಾಸನದಲ್ಲಿ ನಿರೀಕ್ಷೆಯಂತೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಪಕ್ಕಾ ಆಗಿದೆ. ಆದ್ರೆ, ಕೋಲಾರದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿಲ್ಲ. ಮೂಲಗಳ ಪ್ರಕಾರ ಶಾಸಕ ಸಮೃದ್ಧಿ ಮಂಜುನಾಥ್ ಅವರನ್ನು ಅಖಾಡಕ್ಕಿಳಿಸಲು ಜೆಡಿಎಸ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಕೋಟಾದಲ್ಲಿ ಇರುವ ಈ ಮೂರು ಕ್ಷೇತ್ರಗಳು ಒಕ್ಕಲಿಗರ ಭದ್ರಕೋಟೆಗಳಾಗಿವೆ. ಒಕ್ಕಲಿಗರ ಮೇಲೆ ಜೆಡಿಎಸ್ಗೆ ಹಿಡಿತವಿದೆ. ಅಲ್ಲದೇ ಕುಮಾರಸ್ವಾಮಿ ಮತ್ತು ದೇವೇಗೌಡ ಒಕ್ಕಲಿಗ ಸಮುದಾಯದ ಪ್ರಭಾವಿ ವ್ಯಕ್ತಿಗಳಾಗಿದ್ದಾರೆ. ಕಾಂಗ್ರೆಸ್ನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಬಲ ಒಕ್ಕಲಿಗ ನಾಯಕ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗರು ತಮ್ಮ ಬೆಂಬಲವನ್ನು ವಿಭಜಿಸಿದ ಪರಿಣಾಮ ಜೆಡಿಎಸ್ ಮೇಲೆ ತೀವ್ರ ಪರಿಣಾಮ ಬೀರಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರು ಯಾವ ರೀತಿ ಮತ ಚಲಾಯಿಸುತ್ತಾರೆ ಎಂಬುವುದರ ಮೇಲೆ ಫಲಿತಾಂಶ ನಿಂತಿದೆ.
Big Shock for Sumalatha Ambarish and Muniswami, Mandya, Kolar, Hassan list finalised.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm