ಬ್ರೇಕಿಂಗ್ ನ್ಯೂಸ್
16-03-24 08:58 pm HK News Desk ಕರ್ನಾಟಕ
ಕೊಪ್ಪಳ, ಮಾ.16: ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ಕೊಟ್ಟಿಲ್ಲ, ಆದರೆ ಸೌಜನ್ಯಕ್ಕೂ ಈ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಇದು ನನಗೆ ಬೇಸರ ಆಗಿದೆ. ಒಂದೇ ಮಾತಿನಲ್ಲಿ ಹೇಳುವುದೆಂದರೆ ನಾಯಕರು ನನ್ನನ್ನ ಗುಜರಿ ಲೀಡರ್ ಎಂದು ತಿಳಿದುಕೊಂಡಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ನಾಯಕರ ವಿರುದ್ದವೇ ಆಕ್ರೋಶ ಹೊರ ಹಾಕಿದ್ದಾರೆ.
ಗಿಣಗೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕರಡಿ ಸಂಗಣ್ಣ ಒಬ್ಬ ಗುಜರಿ ಲೀಡರ್ ಎಂದು ತಿಳಿದು ಅವರು ನನಗೆ ಟಿಕೆಟ್ ಕೊಡದೇ ಬಿಟ್ಟಿರಬಹುದು. ನನಗೆ ಟಿಕಿಟ್ ತಪ್ಪಿದಾಗ ಬೆಂಬಲಿಗರಲ್ಲಿ ಅಸಮಾಧಾನ ಆಗುವುದು ಸಹಜ. ಪಕ್ಷ ಘೋಷಿಸಿದ ಅಭ್ಯರ್ಥಿ ಒಪ್ಪಿಕೊಳ್ಳಬೇಕು. ಬಿಜೆಪಿ ಈಗಾಗಲೇ ಅಭ್ಯರ್ಥಿಯನ್ನು ಘೋಷಿಸಿದೆ. ಅವರನ್ನು ಬದಲಿಸಿ ಎನ್ನುವುದಿಲ್ಲ. ಟಿಕೆಟ್ ವಿಚಾರ ಮುಗಿದ ಅಧ್ಯಾಯ ಎಂದರು.
ಹೈಕಮಾಂಡ್‌ಗೆ ಮೂರು ಪ್ರಶ್ನೆ ಕೇಳಿರುವೆ. ನನಗೆ ಬಿಜೆಪಿ ಹೈಕಮಾಂಡ್ ಈ ವರೆಗೂ ಯಾಕೆ ಕರೆ ಮಾಡಿಲ್ಲ ? ನನಗೆ ಟಿಕೆಟ್ ತಪ್ಪಿಸಲು ಕಾರಣ ಯಾರು ? ಉದ್ದೇಶವೇನು ? ಈ ಪ್ರಶ್ನೆಗೆ ಅವರು ಉತ್ತರ ಕೊಡುವುದನ್ನು ಕಾಯುತ್ತಿದ್ದೇನೆ. ಹೈಕಮಾಂಡ್‌ನಿಂದ ಉತ್ತರ ಸಿಗುವ ವರೆಗೂ ನಾನು ಕಾದು ನೋಡುವೆ. ನಾವೇನು ಗಡುವು ಕೊಟ್ಟಿಲ್ಲ. ಗುಡುವು ಕೊಟ್ಟರೆ ನಮಗೆ ನಷ್ಟ ಎಂದರು.
ನಾನು ಈ ಬಾರಿ ಮತ್ತೊಮ್ಮೆ ಅವಕಾಶ ಕೊಡಿ ಎಂದು ಹೈಕಮಾಂಡ್‌ಗೆ ಮನವಿ ಮಾಡಿದ್ದೇ ಆದರೆ ಟಿಕೆಟ್ ಸಿಗಲಿಲ್ಲ. ಕಾಂಗ್ರೆಸ್‌ನ ಹಲವು ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಕಾಂಗ್ರೆಸ್‌ಗೆ ಆಹ್ವಾನ ವಿಚಾರ ನಾನು ಇನ್ನು ಯಾವ ನಿರ್ಧಾರ ಮಾಡಿಲ್ಲ. ನಮ್ಮವರ ಅಭಿಪ್ರಾಯ ಪಡೆಯಬೇಕಾಗುತ್ತದೆ. ಶ್ರೀನಾಥ್ ಅವರು ನನ್ನ ಮೇಲಿನ ಅಭಿಮಾನಕ್ಕೆ ಅವರು ಆಹ್ವಾನ ಮಾಡಿದ್ದಾರೆ ಎಂದರು.
ನಾನೇನು ರಾಜಕೀಯ ನಿವೃತ್ತಿಯಾಗುವುದಿಲ್ಲ. ನನ್ನನ್ನು ನಂಬಿದ ತುಂಬಾ ಜನರು ಇದ್ದಾರೆ. ಬಿಜೆಪಿ ಬಿಟ್ಟು ಏಲ್ಲಿಗೂ ಹೋಗುವುದಿಲ್ಲ. ರಾಜಕೀಯವಾಗಿ ಮಾಡುವ ಕೆಲಸಗಳು ಸಾಕಷ್ಟಿವೆ. ನನಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸಾಕಷ್ಟು ನೋವಿದೆ ಎಂದು ಭಾವನಾತ್ಮಕ ಮಾತುಗಳನ್ನಾಡಿದರು.
BJP ticket miss, Koppal karadi sanganna cries on stage, says BJP leaders have taught that I am a scrap
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am