ಬ್ರೇಕಿಂಗ್ ನ್ಯೂಸ್
19-03-24 07:22 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.19: ನಮ್ಮಲ್ಲಿ ಸೂಪರ್ ಸಿಎಂ ಇಲ್ಲ, ಶ್ಯಾಡೋ ಸಿಎಂ ಅಲ್ಲ. ಇರೋದು ಒಬ್ಬರೇ ಸಿಎಂ ಅದು “ಸ್ಟ್ರಾಂಗ್ ಸಿಎಂ”. ನಿಮ್ಮ ಹಾಗೇ ನಾನು “ವೀಕ್ ಪಿಎಂ” ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ. ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೇ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ಬಿಜೆಪಿ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ ಎಂದು ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ.
ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಬಿಜೆಪಿ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ನರೇಂದ್ರ ಮೋದಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Siddaramaiah slams Modi for his controversial statement in shivamogga, says you are a weak pm. Modis followers are thinking that hes world leader but he's the worst pm he added.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm