ಬ್ರೇಕಿಂಗ್ ನ್ಯೂಸ್
20-03-24 09:16 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 20: ಆಧ್ಯಾತ್ಮಿಕ ಗುರು, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತೀವ್ರ ತಲೆ ನೋವು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೈದ್ಯರು ತುರ್ತು ಮೆದಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಮಾರ್ಚ್ 20 ಬೆಳಿಗ್ಗೆ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಸದ್ಗುರು ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಶಿವರಾತ್ರಿ ಉತ್ಸವದ ಕಳೆದ ಕೆಲ ದಿನಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಆಸ್ಪತ್ರೆ ವೈದ್ಯರ ಸಂಪರ್ಕ ಮಾಡಿದ್ದರು. ಆದರೆ, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕೆ ಹಿಂದೇಟು ಹಾಕಿದ್ದರು. ಆ ಬಳಿಕ ಎಡಗಾಲು ಸೆಳೆತ ಸೇರಿದಂತೆ ತಲೆ ನೋವು ಮತ್ತಷ್ಟು ಹೆಚ್ಚಳವಾಗಿದೆ. ಈ ಹಿನ್ನೆಲೆ ಸಿಟಿ ಮತ್ತು ಎಂಐಆರ್ ಸ್ಕ್ಯಾನ್ ಮಾಡಿದಾಗ ಮೆದಳಿನಲ್ಲಿ ರಕ್ತ ಸ್ರಾವವಾಗಿದೆ ಜೊತೆಗೆ ಮೆದುಳಿನಲ್ಲಿ ಊತವಾಗಿದೆ ಎಂದು ತಿಳಿದುಬಂದಿದೆ. ಆಸ್ಪತ್ರೆ ದಾಖಲಾದ ಸದ್ಗುರುವಿನ ತಪಾಸಣೆ ನಡೆಸಿದ ವೈದ್ಯರು ತುರ್ತು ಮೆದುಳು ಶಸ್ತ್ರಚಿಕಿತ್ಸೆ ಮಾಡಿದ್ದಾರೆ

ಸದ್ಗುರುಗಳಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿಗಳು ಟ್ವೀಟ್ ಮಾಡಿದ್ದು, " ಸದ್ಗುರುಗಳ ಜತೆ ಕರೆ ಮಾಡಿ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಸಿಗಲಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ " ಎಂದಿದ್ದಾರೆ.
ಇನ್ನು ಸದ್ಗುರು ಆಸ್ಪತ್ರೆ ದಾಖಲು ಮಾಹಿತಿ ಹೊರಬೀಳುತ್ತಿದ್ದಂತೆ ದೇಶ ವಿದೇಶದಲ್ಲಿರುವ ಸದ್ಗುರು ಅನುಯಾಯಿಗಳು, ಶಿಷ್ಯರು, ಬೆಂಬಲಿಗರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
Sadhguru Jaggi Vasudev underwent surgery at a Delhi hospital for a life-threatening brain bleed, his Isha Foundation said in a statement. He is recovering well, and improving "beyond expectations", it added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm