ಬ್ರೇಕಿಂಗ್ ನ್ಯೂಸ್
20-03-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.20: ತಮಿಳು ಭಾಷಿಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ, ಕರ್ನಾಟಕದ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾಗೆ ಪತ್ರ ಬರೆದಿರುವ ಕೇಂದ್ರ ಚುನಾವಣಾ ಆಯೋಗ, ಶೋಭಾ ವಿರುದ್ಧ ಕ್ರಮಕ್ಕೆ ಸೂಚಿಸಿದೆ. ತಮಿಳುನಾಡಿನ ಡಿಎಂಕೆ ಕಾರ್ಯದರ್ಶಿ ಆರ್.ಎಸ್. ಭಾರತಿ ನೀಡಿದ ದೂರಿನಂತೆ, ಶೋಭಾ ವಿರುದ್ಧ 48 ಕಂಟೆಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಡಿ ಕ್ರಮ ಕೈಗೊಳ್ಳುವಂತೆ ಆಯೋಗ ಸೂಚಿಸಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳು ತಮಿಳಿನವರು, ತಮಿಳುನಾಡಿನಿಂದ ಇಲ್ಲಿ ಬಂದು ತರಬೇತಿ ಪಡೆದು ವಿಧ್ವಂಸಕ ಕೃತ್ಯ ಎಸಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಗರ್ತಪೇಟೆಯ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶೋಭಾ ವಿರುದ್ಧ ಮಧುರೈ ನಗರ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಖಂಡಿಸಿ 'ಎಕ್ಸ್' ನಲ್ಲಿ ಪೋಸ್ಟ್ ಹಾಕಿದ್ದರು. ಅಲ್ಲದೆ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಮಧುರೈನ ಸಿ. ತ್ಯಾಗರಾಜನ್ ಎಂಬವರು ಶೋಭಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಸಮಯದಲ್ಲಿ ಶೋಭಾ ಅವರ ಹೇಳಿಕೆಯು ತಮಿಳು ಮತ್ತು ಕನ್ನಡಿಗರ ನಡುವೆ ದ್ವೇಷ ಮೂಡಿಸುವಂತಿದೆ ಎಂದು ಟೀಕಿಸಿದ್ದಾರೆ. ತಮಿಳು ಜನರನ್ನು ಭಯೋತ್ಪಾದಕರು ಎಂಬಂತೆ ಹೇಳಿಕೆ ನೀಡಿದ್ದಾರೆ. ಇದು ಉಭಯ ರಾಜ್ಯಗಳ ಸಂಬಂಧವನ್ನು ಹಾಳು ಮಾಡುತ್ತದೆ ಮತ್ತು ಎರಡೂ ರಾಜ್ಯಗಳ ನಡುವೆ ಉದ್ವಿಗ್ನ ಸ್ಥಿತಿ ಉಂಟುಮಾಡುತ್ತದೆ ಎಂದಿದ್ದಾರೆ.
ದೂರಿನ ಆಧಾರದ ಮೇಲೆ ಮಧುರೈ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಶೋಭಾ ವಿರುದ್ಧ ಐಪಿಸಿ ಸೆಕ್ಷನ್ 153, 153 ಎ, 505 (1) (ಬಿ) ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Hours after Union Minister Shobha Karandlaje’s assertion that the suspect involved in the March 1 blast at The Rameshwaram Cafe was from Tamil Nadu stirred controversy, the Bharatiya Janata Party (BJP) leader issued a retraction and offered an apology.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am