ಬ್ರೇಕಿಂಗ್ ನ್ಯೂಸ್
22-03-24 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.22: ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಪ್ರವೇಶದಿಂದಾಗಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟಿದ್ದ 5, 8 ಮತ್ತು 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ಮುಂದುವರಿಸಲು ರಾಜ್ಯ ಹೈಕೋರ್ಟ್ ದ್ವಿಸದಸ್ಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಪರೀಕ್ಷೆ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ವತಿಯಿಂದ ನಡೆಸುವ ಪರೀಕ್ಷೆಗೆ ಅನುಮತಿ ನೀಡಿರುವುದಲ್ಲದೆ, ಇತರೇ ವಿಷಯಗಳ ಪರೀಕ್ಷೆ ನಡೆಸುವುದಕ್ಕೂ ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.
5, 8 ಮತ್ತು 9ನೇ ತರಗತಿಯ ಉಳಿದಿರುವ ಪರೀಕ್ಷೆಗಳನ್ನು ಸೋಮವಾರದಿಂದಲೇ ನಡೆಸಲು ಸರ್ಕಾರಕ್ಕೆ ಸೂಚಿಸಿದೆ. ಈಗಾಗಲೇ ಐದನೇ ತರಗತಿಯ ನಾಲ್ಕು ವಿಷಯಗಳ ಪೈಕಿ ಎರಡು ಪರೀಕ್ಷೆ ಮುಗಿದಿದೆ. 8 ಹಾಗೂ 9 ತರಗತಿಗಳ ನಾಲ್ಕು ವಿಷಯಗಳ ಪರೀಕ್ಷೆ ನಡೆದಿದೆ. ಮಾರ್ಚ್ 13ರಂದು ಖಾಸಗಿ ಶಾಲೆಗಳ ಮೇಲ್ಮನವಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಹೈಕೋರ್ಟ್‌ನಲ್ಲೇ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಲು ಸೂಚಿಸಿತ್ತು. ಅದರಂತೆ, ಹೈಕೋರ್ಟ್ ತೀರ್ಪು ನೀಡಿದ್ದು ತಾವು ಹೇಳಿದ್ದೇ ನಡೆಯಬೇಕೆಂಬ ಖಾಸಗಿ ಶಾಲೆಗಳ ಒಕ್ಕೂಟದ ನಡೆಗೆ ಚಾಟಿ ಬೀಸಿದೆ.
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಪಬ್ಲಿಕ್ ಪರೀಕ್ಷೆ ಮಾರ್ಚ್ 11ರಿಂದ ತೊಡಗಿ ಮಾರ್ಚ್ 18ಕ್ಕೆ ಮುಗಿಯಬೇಕಿತ್ತು. ಮಾರ್ಚ್ 12ರಂದು ಹೈಕೋರ್ಟ್ ಬಳಿಕ ಸುಪ್ರೀಂಕೋರ್ಟ್ ಕದ ತಟ್ಟಿ ತಡೆಯಾಜ್ಞೆ ತಂದಿದ್ದರಿಂದ ಪರೀಕ್ಷೆ ಅರ್ಧಕ್ಕೆ ನಿಲ್ಲುವಂತಾಗಿತ್ತು. ಇದರಿಂದ ಶಿಕ್ಷಕರು, ಸಿಬಂದಿ ಜೊತೆಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದರು. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವಾಗಲೇ ಇತರ ತರಗತಿಗಳ ಪಬ್ಲಿಕ್ ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
A two-judge bench of the Karnataka High Court has given the green signal to resume the public examinations for classes 5, 8 and 9, which were put on hold midway due to the intervention of a single-judge bench of the High Court. A division bench of the high court upheld the appeal filed against the single-judge bench's order quashing the education department's circular on the examination.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm