ಬ್ರೇಕಿಂಗ್ ನ್ಯೂಸ್
29-03-24 03:40 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮಾಡಿರುವ ಟೀಕೆಗೆ ಬಿಜೆಪಿ ನಾಯಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![]()
1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.
ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

ಏನು ಹೇಳಿದ್ದರು ಯತೀಂದ್ರ ಸಿದ್ದರಾಮಯ್ಯ?
ಚಾಮರಾಜನಗರದ ಹನೂರಿನಲ್ಲಿ ಗುರುವಾರ ಕಾಂಗ್ರೆಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಗುಜರಾತ್‌ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ‘ಗೂಂಡಾ, ರೌಡಿ’ ಎಂದು ಟೀಕಿಸಿದ್ದರು.
Congress leader Yathindra Siddaramaiah on Thursday targeted BJP leader and Home minister Amit Shah by accusing him of being a 'goonda, rowdy'.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm