ಬ್ರೇಕಿಂಗ್ ನ್ಯೂಸ್
29-03-24 07:54 pm HK News Desk ಕರ್ನಾಟಕ
ಮೈಸೂರು, ಮಾ.29: ಮತ್ತೊಮ್ಮೆ ಮೋದಿಯೇ ಪ್ರಧಾನಿ ಆಗುತ್ತಾರೆ. ಇದರಲ್ಲಿ ಅನುಮಾನವೇ ಬೇಡ ಎಂದು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ದೇಶದಲ್ಲಿ ಉತ್ತಮ ವಾತಾವರಣ ಇದೆ. ಕರ್ನಾಟಕದಲ್ಲಿ ಸ್ವಲ್ಪ ವೋಟು ಹೊಡೆದು ಹೋಗುತ್ತೆ ಅಷ್ಟೇ. ಆದರೆ ಬಿಜೆಪಿ ಏನು ತೀರಾ ಸೋತು ಹೋಗಲ್ಲ. ಅರ್ಧಕ್ಕಿಂತ ಜಾಸ್ತಿ ಸೀಟು ಗೆಲ್ಲುತ್ತೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎಫೆಕ್ಟಿವ್ ಆಗಿ ಇರಲಿಲ್ಲ. ಅಧಿಕಾರವನ್ನು ಕಂಟ್ರೋಲ್ ಮಾಡೋಕೆ ಆಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ನವರು ಅಧಿಕಾರಿಗಳ ಮೇಲೆ ಸ್ಟ್ರಾಂಗ್ ಇದ್ದಾರೆ. ಆದರೆ ಅವರು ಹೋಗುತ್ತಿರುವ ದಾರಿ ಸರಿಯಿಲ್ಲ. ಗ್ಯಾರಂಟಿ ಕೊಟ್ಟು ಜನಪ್ರಿಯ ಆಗಿರಬಹುದು. ಆದರೆ ಇವರ ಬಳಿ ಹಣ ಇಲ್ಲ. ಹೀಗಾಗಿ ಕೇಂದ್ರದ ಮೇಲೆ ಬೈಯ್ಯುತ್ತಾರೆ. ರಾಜ್ಯದವರ ಭಾಷೆ ಅನ್ ಡಿಗ್ನಿಫೈಡ್ ಲಾಂಗ್ವೇಜ್ ಆಗಿದೆ. ಕಾಂಗ್ರೆಸ್ ನವರಿಗೆ ಗೌರವ ಕೊಟ್ಟು ಮಾತನಾಡುವ ಕಲ್ಚರ್ ಇಲ್ಲ.
ಆದರೆ ಬಿಜೆಪಿಯವರಲ್ಲಿ ಅದು ಇದೆ. ಅಕಸ್ಮಾತ್ ಬಿಜೆಪಿಯವರು ಒರಟಾಗಿ ಮಾತಾಡ್ತಿದ್ದಾರೆ ಅಂದ್ರೆ ಅವರು ಕಾಂಗ್ರೆಸ್ ಫಾಲೋ ಮಾಡ್ತಿದ್ದಾರೆ ಅಂತ. ಅವರು ಏನೇ ಮಾತಾಡಿದ್ರು ನಾವು ನಮ್ಮ ಘನತೆ ಕಡಿಮೆ ಮಾಡಿಕೊಳ್ಳಬಾರದು ಎಂದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ವಾತಾವರಣ ತುಂಬಾ ಚೆನ್ನಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿಗಳ ರೀತಿ ಇರಬೇಕು. ನಮ್ಮಲ್ಲಿ ಆ ರೀತಿ ಸಿಎಂ ಯಾರೂ ಬಂದಿಲ್ಲ. ಅವರು ಆಡಳಿತವನ್ನು ಬಿಗಿಯಾಗಿ ಇಟ್ಟುಕೊಂಡಿದ್ದಾರೆ. ಉತ್ತರ ಭಾರತದಲ್ಲಿ ಬಿಜೆಪಿಗೆ ಗ್ಯಾರಂಟಿ ಇದೆಯೆಂದು ಹೇಳಬಹುದು. ಕರ್ನಾಟಕದಲ್ಲಿ ಸ್ವಲ್ಪ ಆ ಕಡೆ ಈ ಕಡೆ ಅನ್ನಿಸುತ್ತಿದೆ.
![]()
ಗುಜರಾತಿನವರು ಆಕ್ಟೀವ್ ಹಾಗೂ ಆನೆಸ್ಟ್ ಆಗಿ ಕೆಲಸ ಮಾಡುತ್ತಾರೆ. ನಮ್ಮಲ್ಲಿ ಅಂಗಡಿ ವ್ಯಾಪಾರಿಗಳು ಅಂದ್ರೆ ಪೂರ್ಣ ಪ್ರಾಮಾಣಿಕರು ಅಂತ ಹೇಳೊಕೆ ಆಗಲ್ಲ. ಆದರೆ ಗುಜರಾತ್‌ನಲ್ಲಿ 6 ವರ್ಷದ ಮಗು ಕೈಯಲ್ಲಿ ಹಣ ಕೊಟ್ಟು ಕಳುಹಿಸಿದ್ರೂ ವ್ಯಾಪಾರಸ್ಥರು ಪ್ರಾಮಾಣಿಕವಾಗಿ ಚಿಲ್ಲರೆ ಕೊಟ್ಟು ಕಳುಹಿಸುತ್ತಾರೆ. ಗುಜರಾತಿಗಳು ಸುಳ್ಳು ಹೇಳೊಕೆ ಹೋಗೋದಿಲ್ಲ. ಅದಿಲ್ಲ ಅಂದ್ರೆ ಯಾವ ದೇಶ ಉದ್ದಾರ ಆಗೋಕೆ ಸಾಧ್ಯ ಹೇಳಿ. ಮೋದಿ ಅವರೂ ವ್ಯಾಪಾರಿಯಾಗಿ ಪ್ರಾಮಾಣಿಕರಾಗಿದ್ದಾರೆ. ವ್ಯಾಪಾರ ಕೇವಲ ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಮಾಡುತ್ತಾರೆ. ಅವರು ವ್ಯಾಪಾರ ಬಿಟ್ಟು ಬರುವಾಗ ಅಲ್ಲಿದ್ದ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತಮ್ಮ ಬಳಿ ಇದ್ದ 23 ಲಕ್ಷ ಕೊಟ್ಟು ಬಂದರು. ಅದೊಂದು ಮಾದರಿ ಆಯ್ತು. ಕೇಂದ್ರ ಸರ್ಕಾರದಲ್ಲಿ ಅದನ್ನ ಅಳವಡಿಸಿಕೊಂಡರು. ಇದನ್ನೆಲ್ಲ ಕ್ಯಾಪ್ಟಲಿಸ್ಟ್ ಅನ್ನೋಕಾಗುತ್ತಾ..
ಕಾರು ವ್ಯಾಪಾರದಿಂದ ಹಣ ಬಂತು ಅಂದುಕೊಳ್ಳೋದು ಆರ್ಥಿಕತೆ ಅಲ್ಲ. ಅದರಿಂದ ಎಷ್ಟು ಕುಟುಂಬಕ್ಕೆ ನೆರವಾಯಿತು ಎನ್ನುವುದು ನಿಜವಾದ ಆರ್ಥಿಕತೆ ಎಂದರು ಭೈರಪ್ಪ. ಪ್ರತಾಪಸಿಂಹ ಡೈನಾಮಿಕ್ ಮ್ಯಾನ್. ಮೈಸೂರಿನಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಕೆಲಸ ಮಾಡೋಕೆ ಎಂಪಿ ಆಗಿರಬೇಕಂತ ಇಲ್ಲ. ಈಗ ಯದುವೀರ್ ಗೆ ಅವಕಾಶ ಕೊಟ್ಟಿದ್ದಾರೆ. ಸುಟೇಬಲ್ ವ್ಯಕ್ತಿ ಎಂದಿದ್ದಾರೆ.
Dr. S.L. Bhyrappa today said that Prime Minister Narendra Modi will return to power at the Centre.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm