ಬ್ರೇಕಿಂಗ್ ನ್ಯೂಸ್
30-03-24 09:38 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.30: ಚಾಮರಾಜನಗರ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಅವರು ದಿಢೀರ್ ಬೆಳವಣಿಗೆಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಧೀರಜ್ ಪ್ರಸಾದ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಕುಟುಂಬದ ಧೀರಜ್ ಪ್ರಸಾದ್ ಕಾಂಗ್ರೆಸ್ ಸೇರಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ.
ಬಿಜೆಪಿ ಚಾಮರಾಜನಗರದಿಂದ ಮಾಜಿ ಶಾಸಕ ಬಾಲರಾಜ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ತನ್ನ ಪುತ್ರ ಅಥವಾ ಅಳಿಯನಿಗೆ ಟಿಕೆಟ್ ನೀಡುವಂತೆ ಶ್ರೀನಿವಾಸ ಪ್ರಸಾದ್ ಲಾಬಿ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಹಾಲಿ ಸಂಸದರ ಮಾತಿಗೆ ಮನ್ನಣೆ ನೀಡಿರಲಿಲ್ಲ. ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿರುವ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರೀಗ ಯಾರನ್ನು ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಇದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಎಚ್.ಟಿ ಮಹದೇವಪ್ಪ ಅವರು ತನ್ನ ಬೆಂಬಲಿಗರ ಜೊತೆಗೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ಆಮೂಲಕ ತನಗೇನೂ ಅವರ ಜೊತೆ ವೈಮನಸ್ಸು ಇಲ್ಲ ಎನ್ನುವ ಸಂದೇಶ ಸಾರಿದ್ದರು. ಇದೀಗ ಸಂಸದರ ಅಳಿಯನೇ ಬಿಜೆಪಿಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವುದು ಪಕ್ಷದಲ್ಲಿ ತಳಮಳ ಸೃಷ್ಟಿಯಾಗಿದೆ.
In a sudden development, Dheeraj Prasad, son-in-law of MP Srinivas Prasad, who was aspirant for BJP ticket from Chamarajanagar SC reserved Lok Sabha seat, joined the Congress in the presence of KPCC president DK Shivakumar on Friday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am