ಬ್ರೇಕಿಂಗ್ ನ್ಯೂಸ್
03-04-24 02:46 pm HK News Desk ಕರ್ನಾಟಕ
ಮಂಡ್ಯ, ಎ.3: ಸಕ್ಕರೆ ನಾಡು ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನ ಇರೋದಿಲ್ಲ, ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈಬಿಟ್ಟು ಬೇರೆಲ್ಲೂ ಹೋಗೋದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದೆಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ ಎಂದು ಸಂಸದೆ ಸುಮಲತಾ ಪುನರುಚ್ಛರಿಸಿದ್ದಾರೆ.
ಮಂಡ್ಯದಲ್ಲಿ ಬೆಂಬಲಿಗರ ಬಹಿರಂಗ ಸಮಾವೇಶದಲ್ಲಿ ಭಾವಪರವಶರಾಗಿ ಮಾತನಾಡಿದ ಅವರು, ಮಂಡ್ಯದ ಜಿಲ್ಲೆಯ ಜನ ನನಗೆ ತಾಯಿ ಸ್ಥಾನ ನೀಡಿದ್ದೀರಿ, ಈ ತಾಯಿಯನ್ನು ಮಕ್ಕಳಿಂದ ದೂರ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದರು.

ಪಕ್ಷೇತರ ಸ್ಪರ್ಧಿಸುವುದಿಲ್ಲ
ಹಠಕ್ಕೆ ಬಿದ್ದು ಈ ಹೊತ್ತಿನಲ್ಲಿ ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನನ್ನ ಬೆಂಬಲ ನೀಡುತ್ತೇನೆ. ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ದೇಶ ಪರ ಕಾಳಜಿ, ಕೆಲಸಗಳನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ರಾಷ್ಟ್ರ ಮಟ್ಟದ ಪಕ್ಷವೊಂದು ನನ್ನ ಬೆಂಬಲಕ್ಕೆ ಇದ್ದಾಗ ಮುಂದಿನ ದಿನಗಳಲ್ಲಿ ನಾನು ಯಾವ ರೀತಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತೇನೆಂದು ನೀವೆಲ್ಲಾ ನೋಡುತ್ತೀರಿ ಎಂದು ಮಂಡ್ಯ ಜನತೆಗೆ ಆಶ್ವಾಸನೆ ನೀಡಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್ಎಸ್ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.
2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆ ಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ನಿಲ್ಲುವಂತೆ ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರೂ ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದು ಹಿರಿಯ ನಾಯಕರಿಗೆ ತಿಳಿಸಿದ್ದೇನೆ ಎಂದರು.
Incumbent Mandya MP Sumalatha Ambareesh, who won as an independent in 2019 elections, announced her decision to join the BJP and not contest the 2024 elections. This has brought an end to the suspense over her next move which kept both the BJP and the Janata Dal (Secular) on tenterhooks as the two have entered into a pre-poll alliance with the BJP supporting the JD(S) candidate H.D. Kumaraswamy who is contesting from Mandya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm