ಬ್ರೇಕಿಂಗ್ ನ್ಯೂಸ್
30-11-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ನ.30: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ ಮಾಡಲಾಗಿದೆ. ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಮತ್ತು 27 ರಂದು ಚುನಾವಣೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ನಡೆದರೆ, ಡಿ. 27ರಂದು ಉಳಿದ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.
ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳ 45,128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಂದಿನಿಂದಲೇ (ನ.30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ.14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜಕೀಯ ಪಕ್ಷಗಳಿಂದ ಸಿದ್ಧತೆ
ಗ್ರಾಮ ಪಂಚಾಯತ್ ಚುನಾವಣೆಗೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಸಿದ್ಧತೆ ನಡೆಸಿವೆ. ರಾಜ್ಯದೆಲ್ಲೆಡೆ ಮೊದಲ ಹಂತದ ಸಮಾವೇಶಗಳನ್ನು ಆರಂಭಿಸಿ ಜನರನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಪಂಚಾಯತ್ ಅಖಾಡಕ್ಕೆ ಧುಮುಕಿದೆ.
ಬಿಜೆಪಿಯಲ್ಲಿ ಗ್ರಾಪಂ ಚುನಾವಣೆಗೆ ಇಬ್ಬರು ಡಿಸಿಎಂ ಸೇರಿ ಐವರು ಸಚಿವರಿಗೆ ಪಕ್ಷದಿಂದ ಜವಾಬ್ದಾರಿ ವಹಿಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣಾ ಸಿದ್ಧತೆ ದೃಷ್ಟಿಯಿಂದ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಸಮಾವೇಶಗಳನ್ನು ನಡೆಸಲು ಆರಂಭಿಸಿದೆ.
The Karnataka State Election Commission has announced the Gram Panchayat election date as on December 22nd and 27th of 2020.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm