ಬ್ರೇಕಿಂಗ್ ನ್ಯೂಸ್
08-04-24 01:28 pm HK News Desk ಕರ್ನಾಟಕ
ಬಳ್ಳಾರಿ, ಏ 08: ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ, 1.4 ಕೋಟಿ ಮೌಲ್ಯದ 3 ಕೆ.ಜಿ ಚಿನ್ನ, 42 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಮತ್ತು ಗಟ್ಟಿಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
‘ಬಳ್ಳಾರಿ ಡಿವೈಎಸ್‌ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಬ್ರೂಸ್‌ಪೇಟೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಎನ್ ಸಿಂಧೂರ್ ಖಚಿತ ಮಾಹಿತಿ ಆಧರಿಸಿ ನಗರದ ಕಂಬಳಿ ಬಜಾರ್‌ನ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬವರ ಮನೆಯ ಮೇಲೆ ಭಾನುವಾರ ಮಧ್ಯಾಹ್ನ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಆಭರಣ ಸಿಕ್ಕವು’ ಎಂದು ಎಸ್‌ಪಿ ಹೇಳಿದರು.



ಈಗ ಸಿಕ್ಕಿರುವ ಹಣ ಮತ್ತು ಆಭರಣ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿಟ್ಟಿದ್ದೋ, ಹವಾಲದಿಂದ ಬಂದದ್ದೋ ಅಥವಾ ನರೇಶ್ ಸೋನಿ ಅವರ ವ್ಯಾಪಾರ ವ್ಯವಹಾರಕ್ಕೆ ಸಂಬಂಧಿಸಿದ್ದೋ ಖಚಿತವಾಗಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಎಫ್‌ಐಆರ್ ದಾಖಲು ಮಾಡಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ವಿಷಯವನ್ನು ನಾವು ಆದಾಯ ತೆರಿಗೆ ಇಲಾಖೆಯ ಗಮನಕ್ಕೂ ತರುತ್ತೇವೆ’ ಎಂದರು.
ಹಣದ ಮೂಲದ ಬಗ್ಗೆ ಆಭರಣದಂಗಡಿ ಮಾಲೀಕ ನರೇಶ್ ಸೋನಿ ವಿಚಾರಣ ನಡೆಸಲಾಗುತ್ತಿದೆ
ಬಳ್ಳಾರಿ ನಗರ ಮತ್ತು ಗ್ರಾಮೀಣ ಕ್ಷೇತ್ರಗಳು ಕಳೆದ ವಿಧಾನಸಭಾ ಚುನಾವಣೆಯಲ್ಲಿ ‘ಹೆಚ್ಚು ವೆಚ್ಚದ ಕ್ಷೇತ್ರಗಳು’ ಎಂದು ಗುರುತಿಸಿಕೊಂಡಿದ್ದವು. ಹೀಗಾಗಿ ನಾವು ಚುನಾವಣಾ ಆಕ್ರಮಗಳ ಬಗ್ಗೆಯೂ ಹೆಚ್ಚಿನ ಜಾಗ್ರತೆ ವಹಿಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ನರೇಶ್ ಸೋನಿ ಮತ್ತು ಜನಾರ್ದನ ರೆಡ್ಡಿ ಪಕ್ಷ ಕೆಆರ್‌ಪಿಪಿಯೊಂದಿಗೆ ಗುರುತಿಸಿಕೊಂಡಿದ್ದರು. ಸದ್ಯ ಕೆಆರ್‌ಪಿಪಿಯು ಬಿಜೆಪಿಯೊಂದಿಗೆ ವಿಲೀನಗೊಂಡಿದೆ.
Rs 5 crore cash, 106 kg jewellery seized of Hema Jewellers owner house in ballari. Police in Karnataka seized Rs 7.6 crore worth of cash, gold and silver jewellery during a raid on the house of the owner of Hema Jewellers in Kambali Bazaar in Ballari on Sunday. The seized items included Rs 5.60 crore in cash, 3 kg of gold, and 103 kg of silver jewellery with 68 silver bars.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm