Tejasvi Surya Bangalore video: ತೇಜಸ್ವಿ ಸೂರ್ಯ ವಿರುದ್ಧ ಸಭೆಯಲ್ಲಿ ಸಂತ್ರಸ್ತರ ಗಲಾಟೆ ; ಡೌನ್... ಡೌನ್ ತೇಜಸ್ವಿ ಅಂತಾ ಧಿಕ್ಕಾರ, ಜನರನ್ನು ತಳ್ಳಿಕೊಂಡೇ ಹೊರನಡೆದ ಸಂಸದ

15-04-24 05:51 pm       Bangalore Correspondent   ಕರ್ನಾಟಕ

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.

ಬೆಂಗಳೂರು, ಏ 15: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಜನರನ್ನು ತಳ್ಳಿಕೊಂಡೇ ಹೊರ ನಡೆದಿದ್ದಾರೆ.

ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಕಾಂಗ್ರೆಸ್ ವ್ಯಂಗ್ಯ ;  

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.

BJP MP Tejasvi Surya was forced to leave a public meeting in Bengaluru after being confronted by disgruntled depositors who had suffered losses in a multi-crore scam involving the Sri Guru Raghavendra Sahakara Bank Niyamitha (SGRSBN).