MP Karadi Sanganna, resign BJP: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಮತ್ತೊಂದು ವಿಕೆಟ್ ಪತನ ; ಪಕ್ಷಕ್ಕೆ ರಾಜಿನಾಮೆ ನೀಡಿದ ಸಂಸದ ಕರಡಿ ಸಂಗಣ್ಣ, ಕಾಂಗ್ರೆಸ್ ಸೇರಲು ನಿರ್ಧಾರ 

16-04-24 09:52 pm       Bangalore Correspondent   ಕರ್ನಾಟಕ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು, ಎ.16: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನಗೊಂಡಿದೆ. ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಬಿಜೆಪಿ ಟಿಕೆಟ್ ಸಿಗದೇ ಪಕ್ಷದ ನಾಯಕರ ಬಗ್ಗೆ ಮುನಿಸಿಕೊಂಡಿದ್ದ ಕರಡಿ ಸಂಗಣ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬಗ್ಗೆ ಪತ್ರ ಬರೆದಿದ್ದಾರೆ. 

ಸಂಗಣ್ಣ ಅವರು ಎ.17ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಟಿಕೆಟ್ ಸಿಗದೆ ಮುನಿಸಿನಲ್ಲಿದ್ದ ಕರಡಿ ಸಂಗಣ್ಣನವರನ್ನು ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವೊಲಿಸಿದ್ದರು. ಆದರೂ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ.

Koppal BJP MP Karadi Sanganna is expected to announce his decision on joining the Congress on Wednesday after meeting Chief Minister Siddaramaiah and Deputy CM DK Shivakumar.