ಬ್ರೇಕಿಂಗ್ ನ್ಯೂಸ್
17-04-24 07:50 pm Bangalore Correspondent ಕರ್ನಾಟಕ
ಬೆಂಗಳೂರು, ಏ.17: YouTube ವೀವ್ಸ್ ಹೆಚ್ಚಿಸಿಕೊಳ್ಳಲು ಏನೇನೋ ಮಾಡಿದರೆ ಕೇಸ್ ಬೀಳೋದು ಪಕ್ಕಾ. ಯಾಕೆಂದರೆ ಇಲ್ಲೊಬ್ಬ ಯುವಕ ಏರ್‌ಪೋರ್ಟ್‌ನಲ್ಲಿ ವಿಡಿಯೊ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೊ ಶೂಟ್ ಮಾಡಿದ ಯುಟ್ಯೂಬರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಯುಟ್ಯೂಬ್ ಚಾನೆಲ್‌ನಲ್ಲಿ ವೀವ್ಸ್ ಹೆಚ್ಚಿಸಿಕೊಳ್ಳುವ ಭರದಲ್ಲಿ ನಿಯಮ ಮೀರಿ ವಿಡಿಯೊ ಮಾಡಿದ್ದರಿಂದ ಯುವಕನನ್ನು ಏರ್‌ಪೋರ್ಟ್ ಠಾಣೆ ಪೊಲೀಸರು ಬಂಧಿಸಿ, ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಯಲಹಂಕ ಮೂಲದ ಯುಟ್ಯೂಬರ್ ವಿಕಾಸ್ ಗೌಡ ಬಂಧಿತ. ಏರ್ಪೋರ್ಟ್ ರನ್ ವೇ ಚಿತ್ರೀಕರಣ ಮಾಡಿ ಯುಟ್ಯೂಬರ್ ಸಿಕ್ಕಿಹಾಕಿಕೊಂಡಿದ್ದು, ಟಿಕೆಟ್ ಇಲ್ಲದೆ ಒಳಗಡೆ ಹೋಗಿದ್ದೆ, 24 ಗಂಟೆ ರನ್ ವೇ ಬಳಿಯೇ ಇದ್ದೆ ಎಂದು ವಿಡಿಯೊದಲ್ಲಿ ಯುವಕ ಹೇಳಿಕೊಂಡಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಸಿಐಎಸ್ಎಫ್ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಏರ್‌ಪೋರ್ಟ್ ಠಾಣೆ ಪೊಲೀಸರು ಯುಟ್ಯೂಬರ್ ವಿಕಾಸ್ ಗೌಡನನ್ನು ಬಂಧಿಸಿದ್ದಾರೆ.
ವಿಡಿಯೊ ಮಾಡುವ ವೇಳೆ ಟಿಕೆಟ್ ಪಡೆಯದೆ ಒಳಗೆ ಹೋಗಿರುವುದಾಗಿ ಯುವಕ ಹೇಳಿಕೊಂಡಿದ್ದ. ಆದರೆ, ಪೊಲೀಸರ ವಿಚಾರಣೆ ವೇಳೆ ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿರುವುದಾಗಿ ಹೇಳಿದ್ದಾನೆ. ಟಿಕೆಟ್ ಪಡೆದು ಪ್ರಯಾಣ ಮಾಡದೇ ಯುವಕ ರನ್ ವೇನಲ್ಲಿ ಉಳಿದುಕೊಂಡಿದ್ದ. ಸುಮಾರು ನಾಲ್ಕೈದು ಗಂಟೆಗಳ ಕಾಲ ಅಲ್ಲೇ ಇದ್ದು, ವಿಡಿಯೊ ಮಾಡಿಕೊಂಡು ಬಂದಿದ್ದ.
ಎಲ್ಲಾ ಅಧಿಕಾರಿ, ಸಿಬ್ಬಂದಿ ಕಣ್ತಪ್ಪಿಸಿ ಏರ್ಪೋರ್ಟ್ ಪ್ರವೇಶ ಮಾಡಿದ್ದಾಗಿ ವಿಡಿಯೋ ಮಾಡಿದ್ದರಿಂದ ವಿಕಾಸ್‌ನನ್ನು ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 23-year-old YouTuber has been arrested and booked by Bengaluru airport police for breaching airport security under the pretext of travelling from Bengaluru to Chennai. The YouTuber uploaded a video on April 12 on his YouTube channel, mocking the security inside Kempegowda International Airport. He will face stringent legal action as entering a sensitive area like an airport is not acceptable, said sources.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm