Jai Shri Ram, Bangalore, attack, arrest: ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ; ಇಲ್ಲಿ ಜೈಶ್ರೀರಾಮ್ ಅನ್ನಂಗಿಲ್ಲ, ಅಲ್ಲಾಹು ಅಕ್ಬರ್ ಅಷ್ಟೇ ಹೇಳಬೇಕು ಎಂದು ತಾಕೀತು ! ಬೀದಿಯಲ್ಲಿ ಹೊಡೆದಾಡಿದ ಯುವಕರು, ಮೂವರ ಸೆರೆ 

18-04-24 10:58 am       Bangalore Correspondent   ಕರ್ನಾಟಕ

ಶ್ರೀರಾಮ ನವಮಿಯನ್ನು ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದಾಗ ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕಾಗಿ ಮೂವರು ಹಿಂದೂ ಯುವಕರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪು, ಇಲ್ಲಿ ಜೈ ಶ್ರೀರಾಮ್ ಎನ್ನುವಂತಿಲ್ಲ, ಓನ್ಲಿ ಅಲ್ಲಾ.. ಅಲ್ಲಾ ಹು ಅಕ್ಬರ್ ಎಂದು ಹೇಳಬೇಕೆಂದು ಹಲ್ಲೆಗೈದ ಘಟನೆ ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ ನಡೆದಿದೆ. 

ಬೆಂಗಳೂರು, ಎ.17: ಶ್ರೀರಾಮ ನವಮಿಯನ್ನು ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದಾಗ ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕಾಗಿ ಮೂವರು ಹಿಂದೂ ಯುವಕರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪು, ಇಲ್ಲಿ ಜೈ ಶ್ರೀರಾಮ್ ಎನ್ನುವಂತಿಲ್ಲ, ಓನ್ಲಿ ಅಲ್ಲಾ.. ಅಲ್ಲಾ ಹು ಅಕ್ಬರ್ ಎಂದು ಹೇಳಬೇಕೆಂದು ಹಲ್ಲೆಗೈದ ಘಟನೆ ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ ನಡೆದಿದೆ. 

ಬುಧವಾರ ಮಧ್ಯಾಹ್ನ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೂವರು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಕಾರನ್ನು ತಡೆದು ಗಲಾಟೆ ಆರಂಭಿಸಿದ್ದಾರೆ. ಕಾರಿನ ಬಳಿ ಬಂದು ಯುವಕರು ಏನು ನೀವು ಜೈ ಶ್ರೀರಾಮ್ ಎಂದು ಹೇಳಬೇಕಾ? ಇಲ್ಲಿ ಜೈ ಶ್ರೀ ರಾಮ್ ಇಲ್ಲಾ... ಒನ್ಲೀ ಅಲ್ಲಾ... ಅಲ್ಲಾ ಹು  ಅಕ್ಬರ್  ಎಂದು ಹೇಳಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.  

ಕಾರಿನಲ್ಲಿ ಕುಳಿತಿದ್ದ ಹಿಂದೂ ಯುವಕರು ನಮ್ಮ ಹಬ್ಬ, ನಾವು ಘೋಷಣೆ ಹಾಕ್ತೀವಿ. ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡ್ತೀವಾ? ನಿಮ್ಮ ಹಬ್ಬದಲ್ಲಿ ಬಂದು ನಾವು ಪ್ರಶ್ನೆ ಮಾಡ್ತೀವಾ? ಎಂದು ಕೇಳಿದ್ದಾರೆ. ಮುಸ್ಲಿಂ ಯುವಕರು ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು ಎರಡೂ ಕಡೆಯವರು ಬೀದಿಯಲ್ಲಿ ಹೊಡೆದಾಡಿದ್ದಾರೆ. ಮುಸ್ಲಿಂ ಯುವಕರ ಜೊತೆಗೆ ಅಲ್ಲಿಯೇ ಇದ್ದ ಮತ್ತಿಬ್ಬರು ಸೇರಿದ್ದು ಕಾರಿನಲ್ಲಿ ಬಂದಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ನಂತರ ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ಬಂದು ದೂರು ದಾಖಲು ಮಾಡಿದರು.

ಓರ್ವ ಅಪ್ರಾಪ್ತ ಸೇರಿದಂತೆ ಮೂವರ ಸೆರೆ ; 

ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರ್ಮಾನ್, ಸಮೀರ್ ಹಾಗೂ ಓರ್ವ ಅಪ್ರಾಪ್ತ. ಈ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ಕುರಿತು ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾತನಾಡಿ,  ಘಟನೆ ಕುರಿತು ಐಪಿಸಿ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಬಾವುಟ ಹಿಡಿದುಕೊಂಡು ಜೈ ಶ್ರೀರಾಮ್ ಅಂದಿದ್ದಾರೆ. ಈ ವೇಳೆ ಇಬ್ಬರು ಯುವಕರು ಕಾರು ಅಡ್ಡಗಟ್ಟಿದ್ದಾರೆ. ಜೈ ಶ್ರೀರಾಮ್ ಎಂದು ಯಾಕೆ ಕೂಗ್ತಿರಾ, ಅಲ್ಲಾ ಅನ್ನಿ ಎಂದು ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ಮತ್ತಷ್ಟು ಯುವಕರನ್ನು ಕರೆತಂದಿದ್ದಾರೆ. ಈ ವೇಳೆ ಅಲ್ಲಿಗೆ ಬಂದವರು ಸೇರಿಕೊಂಡು ಕಾರಿನಲ್ಲಿದ್ದ ಮೂವರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೇಸ್ ರಿಜಿಸ್ಟರ್ ಆಗಿದೆ ಎಂದಿದ್ದರು.

Three persons were allegedly assaulted in Bengaluru Wednesday for raising “Jai Shri Ram” slogans, the police said, adding that four men have been arrested in relation to the matter.