ಬ್ರೇಕಿಂಗ್ ನ್ಯೂಸ್
22-04-24 07:59 pm HK News Desk ಕರ್ನಾಟಕ
ಮೈಸೂರು, ಏ.22: ಪ್ರಧಾನಿ ಮೋದಿಯನ್ನ ಟೀಕಿಸುವ ಭರದಲ್ಲಿ ಮಾಜಿ ಶಾಸಕ, ಸಿಎಂ ಮಗ ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆದಿವೆ. ಯಾವಾಗಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರೂ ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಏಕೆಂದರೆ ಈ ದೇಶದಲ್ಲಿ ಬಿಜೆಪಿ ಕೋಮುಗಲಭೆ, ದೊಂಬಿ ಗಲಾಟೆ ಸೃಷ್ಟಿ ಮಾಡಿ ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡ್ತಾರೆ. ಇಡೀ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡ್ತಾರೆ. ಮಕ್ಕಳಿಗೆ ಶಿಕ್ಷಣ ಕೊಡದೇ ಕೋಮು ಗಲಭೆಗಳಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡ್ತಾರೆ ಎಂದು ಕಿಡಿ ಕಾರಿದ್ದರೆ.

ಪ್ರಧಾನಿ ಮೋದಿ ಮತ ಕೇಳುವ ನೆಪದಲ್ಲಿ ಅತ್ಯಂತ ತುಚ್ಛವಾದ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದ ಯಾವುದೇ ಒಬ್ಬ ಪ್ರಧಾನಿ ಇಂತಹ ಕೆಳಮಟ್ಟಕ್ಕೆ ಇಳಿಯೋದಿಲ್ಲ. ಮೋದಿ ಅವರು ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಯಾಕೆ ಕಣ್ಣು ಮುಚ್ಚಿ ಕುಳಿತಿದ್ಯೋ ಗೊತ್ತಿಲ್ಲ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಬನ್ಸಾರ್‌ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹಂಚಬಹುದು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಹೇಳಿದ್ದರು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನುಸುಳುಕೋರರಿಗೆ ನೀಡಬಹುದೇ? ಎಂದು ಪ್ರಶ್ನೆ ಮಾಡಿದ್ದರು.
ಅಲ್ಲದೇ ಜನರ ಖಾಸಗಿ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ. ನಮ್ಮ ತಾಯಂದಿರು ಮತ್ತು ಸಹೋದರಿಯರ ಒಡೆತನದ ಮಂಗಳಸೂತ್ರ ಮತ್ತು ಚಿನ್ನದ ಮೌಲ್ಯವು ಅಮೂಲ್ಯವಾಗಿದೆ. ಕಾಂಗ್ರೆಸ್ ಈ ಸಂಪತ್ತನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಮರುಹಂಚಿಕೆ ಮಾಡುವ ಭರವಸೆಯನ್ನು ಹೇಗೆ ನೀಡುತ್ತದೆ? ಎಂದು ಪ್ರಶ್ನಿಸಿದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಹಿಂದೂ ಹೆಣ್ಮಕ್ಕಳ ಮಂಗಳ ಸೂತ್ರವನ್ನೂ ಉಳಿಸೋದಿಲ್ಲ ಎಂದು ಹೇಳಿದ್ದರು.
Yathindra Siddaramaiah slams PM Modi in Mysuru, says all women in state will lose thier husband and children in riots which BJP will raise for the sake of politics.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm