ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ ಸಾವು

26-04-24 03:04 pm       HK News Desk   ಕರ್ನಾಟಕ

ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಪಿಆರ್​ಓ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.

ಚಿತ್ರದುರ್ಗ, ಎ.26: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಪಿಆರ್​ಓ ಒಬ್ಬರು ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ(55) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಲೋಕಸಭಾ ಚುನಾವಣೆ ಹಿನ್ನೆಲೆ ಹೊಟ್ಟೆಪ್ಪನಹಳ್ಳಿ ಮತಗಟ್ಟೆ ಸಂಖ್ಯೆ 202ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ, ಅಷ್ಟರಲ್ಲಿ ಯಶೋಧಮ್ಮ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

An APRO working at a polling booth in Doddappanahalli in Challakere taluk died on Sunday. The deceased has been identified as Yashodamma (55), a resident of Vittal nagar in Challakere town. The deceased woman was working at polling booth number 202 in Doddappanahalli ahead of the Lok Sabha elections. He was brought to Challakere Hospital after he fell ill due to low BP. However, Yashodamma died in the meantime.