ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm