ಬ್ರೇಕಿಂಗ್ ನ್ಯೂಸ್
01-05-24 06:29 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಲೈಂಗಿಕ ಕಿರುಕುಳದ ವಿಡಿಯೋ ಹೊರ ಬರುತ್ತಲೇ ವಿದೇಶಕ್ಕೆ ಹಾರಿದ್ದ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ನೋಟಿಸ್ ನೀಡಿದ ಬೆನ್ನಲ್ಲೇ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ತೆರಳಿದ್ದಾರೆಂದು ಹೇಳಲಾಗಿತ್ತು. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನನ್ನ ವಕೀಲರ ಮೂಲಕ C.I.D ಬೆಂಗಳೂರು ಕಚೇರಿಗೆ ಕಾಲಾವಕಾಶ ಕೇಳಿ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡಕ್ಕೆ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜೆ. ಪತ್ರ ಬರೆದಿದ್ದು, ಕಲಂ 41 (ಎ) ಸಿಆರ್ಪಿಸಿ ಅಡಿಯಲ್ಲಿ ನೀಡಿರುವ ನೋಟಿಸ್ಗೆ ಖುದ್ದಾಗಿ ಹಾಜರಾಗಲು ಏಳು ದಿನಗಳ ಸಮಯ ಕೇಳಿದ್ದಾರೆ. ನೋಟಿಸ್ ಬಗ್ಗೆ ವಿಷಯ ತಿಳಿಸಿದ್ದು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನದ
ಕಾಲಾವಕಾಶ ಅಗತ್ಯವಿದೆ. ನನ್ನ ಕಕ್ಷಿದಾರರಿಗೆ ಸುಮಾರು ಏಳು ದಿನಗಳ ಕಾಲಾವಕಾಶ ನೀಡಬೇಕು. ಅಲ್ಲದೆ, ವಿಚಾರಣೆಗೆ ಹಾಜರಾಗಲು ಮತ್ತೊಂದು ದಿನಾಂಕ ನೀಡಬೇಕು ಎಂದು ವಕೀಲರು ಪತ್ರದ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದಾರೆ.
Prajwal Revanna sex video, Prajwal tweets says not in Bangalore, first reaction. Wednesday tweeted that he was not in Bengaluru to attend the enquiry after a Special Investigation Team (SIT) probing the sex abuse case involving the politician summoned him. Prajwal, the grandson of JD(S) patriarch and former Prime Minister HD Deve Gowda, was asked to appear before the SIT for investigation within 24 hours.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm