ಬ್ರೇಕಿಂಗ್ ನ್ಯೂಸ್
03-05-24 10:34 am Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು ನೀಡಿದ್ದಾರೆ. ಅದರನ್ವಯ ಪ್ರಜ್ವಲ್ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಇದು ಪ್ರಜ್ವಲ್ ವಿರುದ್ಧ ದಾಖಲಾದ 2ನೇ ಪ್ರಕರಣ.
ಪ್ರಕರಣ ಸಂಬಂಧ ಕೋರ್ಟ್ ಮುಂದೆ ಸಂತ್ರಸ್ತೆಯನ್ನ ಹಾಜರುಪಡಿಸಿ ಎಸ್‌ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಸೆಕ್ಷನ್ 164 ಅಡಿ ನ್ಯಾಯಾಧೀಶರ ಮುಂದೆ ಗುಪ್ತವಾಗಿ ಹೇಳಿಕೆ ದಾಖಲಿಸಿದ್ದು ಪ್ರಕರಣದಲ್ಲಿ ಸೆಕ್ಷನ್ 376 ಅಡಿ ಅತ್ಯಾಚಾರ ಆರೋಪ ಹೊರಿಸಲಾಗಿದೆ. ಇದರಿಂದಾಗಿ ಸಂಸದನಿಗೆ ಬಂಧನ ಭೀತಿ ಹೆಚ್ಚಾಗಿದೆ.
ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್.ಡಿ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್‌ಐಟಿ ನೋಟಿಸ್ ನೀಡಿದೆ. ಆದರೆ ಎಸ್‌ಐಟಿ ವಿಚಾರಣೆಗೆ ಹಾಜರಾಗದೆ ಅವರು ಕಾಲಾವಕಾಶ ಕೋರಿದ್ದಾರೆ. ಇದರ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್‌ಗೆ ಮತ್ತಷ್ಟು ತಲೆ ಬಿಸಿ ತಂದಿದೆ.
ಇದೇ ವೇಳೆ, ಎಸ್‌ಐಟಿ ವಿಚಾರಣೆಗೆ ಗೈರಾಗಿ ಬಂಧನ ಭೀತಿ ಎದುರಿಸುತ್ತಿರುವ ಆರೋಪಿ ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ. ರೇವಣ್ಣ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿ ಇಂದಿಗೆ ವಿಚಾರಣೆ ಮುಂದೂಡಿದೆ.
The alleged sexual harassment and sleaze videos case against former PM HD Deve Gowda’s grandson, Hassan MP Prajwal Revanna, took a grave turn on Thursday with another woman alleging she also was sexually assaulted by him.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm