ಬ್ರೇಕಿಂಗ್ ನ್ಯೂಸ್
03-05-24 05:15 pm HK News Desk ಕರ್ನಾಟಕ
ಸುರಪುರ, ಮೇ.3: ಡಿ.ಕೆ. ಶಿವಕುಮಾರ್ ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯ ತೆರೆದಿದ್ದಾರೆ. ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೀಗೆ ಮಾಡಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ತಯಾರಿಸಿಕೊಂಡು ಮನೆಗೆ ಕಳುಹಿಸಿದರು. ಸಮಯ ಬಂದಾಗ ಎದುರಾಳಿಗೆ ಏನು ಕೊಡಬೇಕು ಅದನ್ನು ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್‌ಪರ್ಟ್ ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಓಡಾಡಬೇಡಿ ಸಿದ್ದರಾಮಯ್ಯ ನೀವು ಹುಷಾರಾಗಿರಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆಶಿ ಅಣ್ಣನಿಗೆ ಸಿಎಂ ಆಗಬೇಕಿದೆ. ಡಿ.ಕೆ. ಶಿವಕುಮಾರ್ ಗೆ ನಿಮ್ಮ ಕುರ್ಚಿಯ ಮೇಲೆ ಕಣ್ಣು ಇದೆ. ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಇಳಿಸಬೇಕು. ಹೀಗಾಗಿ ಡಿಕೆ ಏನು ಬೇಕಾದರೂ ಮಾಡೋಕೆ ಸಿದ್ದರಿದ್ದಾರೆ. ಬೇಕಾದ್ರೆ ಯತೀಂದ್ರ ಅವರದ್ದು ಒಂದು ಸಿಡಿ ಬಿಡುತ್ತಾರೆ. ಭ್ರಷ್ಟಾಚಾರದ್ದೋ ಅಥವಾ ಇನ್ಯಾವುದೋ ಒಂದು ಸಿಡಿ ಬಿಡುತ್ತಾರೆ ಎಂದು ಹೇಳಿದ್ದಾರೆ.
BJP Raju Gowda slams DK Shivakumar, Says he has a Pen drive factory and university, says Siddaramaiah to be careful, may he he will release your son's CD to get the CM seat he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm