ಬ್ರೇಕಿಂಗ್ ನ್ಯೂಸ್
04-05-24 07:10 pm HK News Desk ಕರ್ನಾಟಕ
ಮಂಡ್ಯ, ಮೇ.04: ಎಚ್.ಡಿ.ರೇವಣ್ಣನ ವರ್ತನೆ ಸರಿಯಿಲ್ಲ. ಹಿಂದೆ ಲಂಡನ್ ಗೆ ಹೋಗಿದ್ದಾಗ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕಿಕೊಂಡಿದ್ದರು ಎಂದು ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್. ಆರ್.ಶಿವರಾಮೇಗೌಡ ಹೇಳಿದರು.
ರೇವಣ್ಣ ಒಳ್ಳೆಯ ನಡವಳಿಕೆಯ ವ್ಯಕ್ತಿಯಲ್ಲ. ಪ್ರಜ್ವಲ್ ರೇವಣ್ಣ ಇಷ್ಟೊಂದು ದೌರ್ಜನ್ಯ ನಡೆಸುತ್ತಿದ್ದರೂ ಅವರ ಅಪ್ಪ, ಅಮ್ಮ ನೋಡಿಕೊಂಡು ಕತ್ತೆ ಕಾಯ್ತಿದ್ರಾ? ಇಂತಹ ವಿಕೃತ ಮನಸ್ಥಿತಿಯವರನ್ನು ನಾನು ಎಲ್ಲಿಯೂ ನೋಡೇ ಇಲ್ಲ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ಏನು ಇಲ್ಲ ಎಂದು ಹೇಳಿದರು. ಕೂಡಲೇ ಸರ್ಕಾರ ಸೂಕ್ತ ತನಿಖೆ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿ ಕೊಡಬೇಕು. ಪೆನ್‌ಡ್ರೈವ್ ಗಳು ಸಾರ್ವಜನಿಕರಿಗೆ ಸಿಗದಂತೆ ನೋಡಿಕೊಳ್ಳಬೇಕು. ಪ್ರಜ್ವಲ್ ರೇವಣ್ಣ ಗೆದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಫಲಿತಾಂಶಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.
ಪೆನ್‌ಡ್ರೈವ್ ಪ್ರಕರಣದಿಂದ ಬಿಜೆಪಿಗೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಎನ್‌ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ಹೊರ ಹಾಕಬೇಕು ಎಂದು ಶಿವರಾಮೇಗೌಡ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ.ರೇವಣ್ಣ ಇಬ್ಬರನ್ನು ಬಂಧಿ ಸಬೇಕು. ಸಂತ್ರಸ್ತೆಯರ ನೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರು ಬರ್ಬೇಕು ಎಂದರು.
ಬಿಜೆಪಿ ನಾಯಕರ ಬಾಯಿ ಕಟ್ಟಿದಂತಾಗಿದೆ:
ಎನ್‌ಡಿಎ ಕೂಟಕ್ಕೆ ಜೆಡಿಎಸ್ ಸೇರಿಸಿಕೊಂಡಿದ್ದರಿಂದ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಧ್ವನಿ ಎತ್ತಲು ಬಾಯಿ ಕಟ್ಟಿ ಹಾಕಿದಂತಾಗಿದೆ. ಆದ್ದರಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದ್ದರಿಂದ ಎನ್‌ಡಿಎ ಕೂಟದಿಂದ ಜೆಡಿಎಸ್ ಅನ್ನು ಕೈಬಿಡಬೇಕು. ಇಲ್ಲದಿದ್ದರೆ ಜೆಡಿಎಸ್‌ನಿಂದಲೇ ಬಿಜೆಪಿ ಮೇಲೂ ಪರಿಣಾಮ ಬೀರಲಿದೆ ಎಂದರು.
![]()
ಹಿಂದೆ ನಾಗಮಂಗಲ ಕೆಂಚನಹಳ್ಳಿ ಗಂಗಾಧರಮೂರ್ತಿ ಅವರ ಕೊಲೆ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲದಿದ್ದರೂ ಇದೇ ದೇವೇಗೌಡರು ನನ್ನನ್ನು ಜೈಲಿಗೆ ಕಳುಹಿಸಲು 8 ಕಿ.ಮೀ. ದೂರ ಗಂಗಾಧರ ಮೂರ್ತಿ ಅವರ ಫೋಟೋ ಹೊತ್ತುಕೊಂಡು ಪಾದಯಾತ್ರೆ ಮಾಡಿದ್ದರು. ಆಗ ನಾನು ಎಷ್ಟು ನೋವು ಅನುಭವಿಸಿದ್ದೆನು. ಪ್ರಕರಣದಲ್ಲಿ ನನ್ನದು ಯಾವ ಪಾತ್ರ ಇರಲಿಲ್ಲ. ಅದಕ್ಕೆ ನ್ಯಾಯಾಲಯದ ತೀರ್ಪು ಎಲ್ಲರಿಗೂ ಗೊತ್ತಿದೆ. ಅದರಂತೆ ಇಂದು ಸಹ ಸಂತ್ರಸ್ತೆಯರ ಪರವಾಗಿ ಪಾದಯಾತ್ರೆ ಮಾಡಲಿ ಎಂದು ಆಗ್ರಹಿಸಿದರು.
Former MP of JDS, LR Shivarame Gowda, the supreme leader of HD Deve Gowda Family (LR Shivarame Gowda) has dropped a new bomb. He said that this is not the first time that Revanna has been caught in England. Hassan (Hassan), who spoke at a press conference about the pen drive case, has insisted on the expulsion of the JDS party from the NDA.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm