Bengaluru Metro: ನಮ್ಮ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯ ಡಿಂಗ್‌ ಡಾಂಗ್‌ ; ನೋಡೋಕ್ಕೆ ಮುಜುಗರ ಆಗುತ್ತೆ ಎಂದ ಕೆಲವರು, ಅಪ್ಪಿಕೊಂಡು ನಿಂತಿದ್ದರಷ್ಟೇ ಎಂದ ನೆಟ್ಟಿಗರು

06-05-24 03:38 pm       Bangalore Correspondent   ಕರ್ನಾಟಕ

ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ

ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್‌  ಎಂಬುವವರ ಖಾತೆಯಿಂದ ಪೋಸ್ಟ್‌ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್‌ ಮಾಡಿದ್ದಾರೆ.

ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.

Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.