ಬ್ರೇಕಿಂಗ್ ನ್ಯೂಸ್
09-05-24 11:39 am Bengaluru Correspondent ಕರ್ನಾಟಕ
ಬೆಂಗಳೂರು, ಮೇ.9: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ ಎಂಟು ಲಕ್ಷ ವಿದ್ಯಾರ್ಥಿಗಳ ಪೈಕಿ ಶೇ. 73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದೆ.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಪಡೆದಿದ್ದಾರೆ. ನಗರ ಪ್ರದೇಶದಲ್ಲಿ 3.59 ಲಕ್ಷ ಮಂದಿ (ಶೇ. 72.83) ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ 2.71 ಲಕ್ಷ (ಶೇ. 74.17) ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಸರ್ಕಾರಿ ಶಾಲೆಯ 2.43 ಲಕ್ಷ ಮಂದಿ (ಶೇ. 72.46) ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅನುದಾನಿತ 1.50 ಲಕ್ಷ ಮಂದಿ ಅಂದರೆ ಶೇಕಡಾ 72.22 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅನುದಾನರಹಿತ ಶಿಕ್ಷಣ ಸಂಸ್ಥೆಗಳ 2.23 ಲಕ್ಷ ವಿದ್ಯಾರ್ಥಿಗಳು (ಶೇ. 86.46) ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
ಈ ಬಾರಿ ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ, ಶಿವಮೊಗ್ಗ ಮೂರು ಮತ್ತು 4ನೇ ಸ್ಥಾನದಲ್ಲಿ ಕೊಡುಗು ಜಿಲ್ಲೆಯಿದೆ. ದಕ್ಷಿಣ ಕನ್ನಡ ಜಿಲ್ಲೆ 92.12%, ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ಪರ್ಸಂಟೇಜ್ ಪಡೆದಿದೆ. ಒಟ್ಟು 625ಕ್ಕೆ 624 ಅಂಕವನ್ನು 7 ವಿದ್ಯಾರ್ಥಿಗಳು, 623 ಅಂಕಗಳನ್ನು 14 ವಿದ್ಯಾರ್ಥಿಗಳು, 622 ಅಂಕವನ್ನು 21 ವಿದ್ಯಾರ್ಥಿಗಳು, 621 ಅಂಕವನ್ನು 44 ವಿದ್ಯಾರ್ಥಿಗಳು ಮತ್ತು 620 ಅಂಕವನ್ನು 64 ವಿದ್ಯಾರ್ಥಿಗಳು ಪಡೆದಿದ್ದಾರೆ.

ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್
625ಕ್ಕೆ 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮೇದಾ ಪಿ. ಶೆಟ್ಟಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.
SSLC results 2024, Udupi first, mangalore secures second place. Udupi and Dakshina Kannada have secured the first and second place in the state respectively. with 94% and 92.12% pass percentages respectively.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm