Prajwal Revanna sex case, Devaraje Gowda: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿಕೆಶಿ ಮೇಲೆ ಆರೋಪ ಮಾಡಿದ್ದ ವಕೀಲ ದೇವರಾಜೇಗೌಡ ಪೊಲೀಸರ ವಶಕ್ಕೆ ; ಮಹಿಳೆಯ ಕಿರುಕುಳ ಪ್ರಕರಣದಲ್ಲಿ ಬಂಧನ ಸಾಧ್ಯತೆ 

10-05-24 11:01 pm       Bangalore Correspondent   ಕರ್ನಾಟಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿಕೆಶಿ ವಿರುದ್ಧವೇ ಆರೋಪ ಮಾಡಿದ್ದ ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು, ಮೇ.10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿಕೆಶಿ ವಿರುದ್ಧವೇ ಆರೋಪ ಮಾಡಿದ್ದ ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಚಿತ್ರದುರ್ಗ ಜಿಲ್ಲೆಯ ಗುಹಿಲಾಳ್ ಟೋಲ್ ಬಳಿ ಇನ್ನೋವಾದಲ್ಲಿ ತೆರಳುತ್ತಿದ್ದ ಗೌಡರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಮಹಿಳೆಯೊಬ್ಬರು ತನಗೆ ಕಿರುಕುಳ ನೀಡಿದ್ದಾಗಿ ಆರೋಪಿಸಿ ದೂರು ನೀಡಿದ್ದರು.‌

Prajwal Revanna: No woman has come to us to file complaint against Prajwal  Revanna: NCW | India News - Times of India

Video of DK Shivakumar slapping Congress worker goes viral, BJP criticises  | Latest News India - Hindustan Times

ಇತ್ತೀಚೆಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವರಾಜೇಗೌಡ ಹೆಸರು ತಗ್ಲಾಕ್ಕೊಂಡಿದ್ದಲ್ಲದೆ, ವಿಡಿಯೋಗಳನ್ನು ಅವರೇ ರಿಲೀಸ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.  ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷವೇ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡ, ಹಾಸನದಿಂದ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು. ಇದೀಗ ದೇವರಾಜೇ ಗೌಡರನ್ನು ವಶಕ್ಕೆ ಪಡೆದಿರುವ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದು ಎಸ್ಐಟಿ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ.

Prajwal Revanna sex case lawyer Devaraje Gowda taken to police custody by SIT team after his video of him molesting women went viral.