ಬ್ರೇಕಿಂಗ್ ನ್ಯೂಸ್
11-05-24 05:25 pm HK News Desk ಕರ್ನಾಟಕ
ಚಿಕ್ಕೋಡಿ, ಮೇ.11: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.
ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.
ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.
ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Belagavi accident cruiser van tyre blast, three women killed on spot.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm