ಬ್ರೇಕಿಂಗ್ ನ್ಯೂಸ್
11-05-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಆರು ಸ್ಥಾನಗಳ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಐದು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು ಜೆಡಿಎಸ್ಸಿಗೆ ಹಾಲಿ ಭೋಜೇಗೌಡ ಸದಸ್ಯರಿರುವ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಒಂದನ್ನು ಮಾತ್ರ ಬಿಟ್ಟುಕೊಟ್ಟಂತಿದೆ.
ಮಾಜಿ ಸಿಎಂ ಯಡಿಯೂರಪ್ಪ 4-2 ಸ್ಥಾನಗಳಿಗೆ ಮೈತ್ರಿ ಎಂದು ಹೇಳುತ್ತ ಬಂದಿದ್ದರೂ ಬಿಜೆಪಿ ರಾಷ್ಟ್ರೀಯ ನಾಯಕರು ಐದು ಸ್ಥಾನಗಳಿಗೆ ಅಭ್ಯರ್ಥಿ ಪ್ರಕಟಿಸಿರುವುದು ರಾಜ್ಯ ಬಿಜೆಪಿಗೆ ಶಾಕ್ ನೀಡಿದಂತಿದೆ. ಮೈತ್ರಿ ಬಗ್ಗೆ ಅಪಸ್ವರ ಎದ್ದಿರುವಾಗಲೇ ಈ ರೀತಿಯ ಶಾಕ್ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ್ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಲಿ ಸದಸ್ಯ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಹಾಲಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮುಖಂಡ ಇ.ಸಿ.ನಿಂಗರಾಜು ಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಚನ್ನಗಿರಿ ಹಾಗೂ ಶಿವಮೊಗ್ಗದ ವೈದ್ಯ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಪ್ರಕಟಿಸಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಹೆಸರನ್ನು ಪ್ರಕಟಿಸದೇ ಇರುವುದರಿಂದ ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆಯೇ ಎನ್ನುವುದು ಇನ್ನೂ ದೃಢವಾಗಿಲ್ಲ.
ಪರಿಷತ್ ಚುನಾವಣೆಯಲ್ಲಿ ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಕುರಿತು ರಾಜ್ಯ ನಾಯಕರ ಹಂತದಲ್ಲಿ ಚರ್ಚೆಗಳಾಗಿದ್ದವು. ಮೈಸೂರಿನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯರಾಗಿರುವ ಜೆಡಿಎಸ್ ನ ಎಸ್.ಎಲ್.ಬೋಜೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ದಿಢೀರ್ ಆಗಿ ಐದು ಸ್ಥಾನಗಳಿಗೆ ಅಭ್ಯರ್ಥಿ ಘೋಷಿಸಿದ್ದು ಮೈತ್ರಿಗೆ ಎಳ್ಳುನೀರು ಬಿತ್ತಾ ಎನ್ನುವ ಚರ್ಚೆಗೆ ಕಾರಣವಾಗಿಸಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಕೇಸಿನ ಬಳಿಕ ಮೈತ್ರಿಯನ್ನು ಕಡಿದುಕೊಳ್ಳಬೇಕು ಎಂಬ ಬಗ್ಗೆ ಬಿಜೆಪಿ ಒಳಗಿನ ನಾಯಕರು ಪ್ರತಿಪಾದನೆ ಮಾಡುತ್ತ ಬಂದಿದ್ದಾರೆ.
The BJP high command has announced its candidates for five seats for the six seats to the Legislative Council from the teachers' and graduates' constituencies in Karnataka, leaving only one seat for the JD(S), which has the sitting Bhojegowda members.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm