ಬ್ರೇಕಿಂಗ್ ನ್ಯೂಸ್
12-05-24 10:51 am HK News Desk ಕರ್ನಾಟಕ
ಹಾಸನ, ಮೇ 12: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿದ್ದ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇವರಾಜೇಗೌಡ ಅವರನ್ನು ಶುಕ್ರವಾರ ಚಿತ್ರದುರ್ಗದ ಹಿರಿಯೂರು ಬಳಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಈ ವೇಳೆ ಲೈಂಗಿಕ ದೌರ್ಜನ್ಯದ ಕೇಸ್‌ನಲ್ಲಿ ಪೊಲೀಸರು ಬಂಧಿಸಿ, ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರೋ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಕೇಸ್ ಮೇಲೆ ದೇವರಾಜೇಗೌಡನನ್ನ ಪೊಲೀಸರು ಬಂಧಿಸಿದ್ದರು. ಈ ಕೇಸ್‌ನಲ್ಲಿ ಇದೀಗ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶನಿವಾರ ಬೆಳಿಗ್ಗೆಯಿಂದ ದೇವರಾಜೇಗೌಡರನ್ನ ವಿಚಾರಣೆ ನಡೆಸಿದ ಪೊಲೀಸರು, ಸಂಜೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ರಾಮ್ ಅವರ ಮನೆಯಲ್ಲಿ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಇನ್ನು ನ್ಯಾಯಾಧೀಶರ ಆದೇಶ ಹೊರಬೀಳುತ್ತಿದ್ದಂತೆ ಹಾಸನ ಜಿಲ್ಲಾ ಕಾರಾಗೃಹಕ್ಕೆ ವಕೀಲ ದೇವರಾಜೇಗೌಡನನ್ನ ಹೊಳೆನರಸೀಪುರ ಠಾಣೆ ಪೊಲೀಸರು ಸ್ಥಳಾಂತರಿಸಿದರು. ಈ ವೇಳೆ ಮಾತನಾಡಿದ ಗೌಡ, ಇನ್ನು ಎಂಟು ದಿನದಲ್ಲಿ ಹೊರಗೆ ಬರ್ತೇನೆ. ಸತ್ಯಕ್ಕೆ ಎಂದೂ ಜಯ ಇದೆ ಅಂತ ಹೇಳುತ್ತಲೇ, ಜೈಲಿಗೆ ಹೊರಟ್ರು.
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲನ ವಿರುದ್ಧ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.
BJP leader and advocate G Devaraje Gowda was arrested in connection with a sex abuse video allegedly belonging to Hassan JD(S) MP Prajwal Revanna. According to police, Devaraje Gowda was arrested at Gulihal tollgate by the Hiriyur police in this district on Friday night for leaking the video in a pen drive.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm